ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್ 
ದೇಶ

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಕಾರ

Lingaraj Badiger

ನವದೆಹಲಿ: ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಕೊಳ್ಳದಂತೆ ನಿರ್ದೇಶನ ನೀಡುವಂತೆ ಕೋರಿ ದೆಹಲಿ ಸಿಎಂ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಹಂತದಲ್ಲಿ ಮಧ್ಯಂತರ ಪರಿಹಾರ ನೀಡಲು ನಾವು ಒಲವು ಹೊಂದಿಲ್ಲ ಎಂದು ಹೇಳಿದೆ.

ಕೇಜ್ರಿವಾಲ್ ಅವರ ಮನವಿಗೆ ಉತ್ತರಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದ ಹೈಕೋರ್ಟ್, ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದೆ.

ವಿಚಾರಣೆಗೆ ಹಾಜರಾಗುವಂತೆ ಇಡಿ ಒಂಬತ್ತನೇ ಬಾರಿ ಸಮನ್ಸ್‌ ಜಾರಿ ಮಾಡಿದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರು ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರು ಪದೇ ಪದೇ ಇಡಿ ಮುಂದೆ ಹಾಜರಾಗಲು ನಿರಾಕರಿಸುತ್ತಿರುವ ಕೇಜ್ರಿವಾಲ್ ಅವರು ತಮಗೆ ನೀಡುತ್ತಿರುವ, ಸಮನ್ಸ್‌ಗಳು ಕಾನೂನುಬಾಹಿರ ಎಂದು ಹೇಳಿದ್ದಾರೆ.

ಇಡಿ ಮುಂದೆ ವಿಚಾರಣೆಗೆ ಏಕೆ ಹಾಜರಾಗುತ್ತಿಲ್ಲ ಎಂದು ನ್ಯಾಯಾಲಯ ಬುಧವಾರ ಕೇಜ್ರಿವಾಲ್ ಅವರನ್ನು ಪ್ರಶ್ನಿಸಿತ್ತು. ಇದಕ್ಕೆ ಉತ್ತರಿಸಿದ ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ತಮ್ಮ ಕಕ್ಷಿದಾರರು ಇಡಿ ಮುಂದೆ ಹಾಜರಾಗುತ್ತಾರೆ. ಆದರೆ ಲೋಕಸಭೆ ಚುನಾವಣೆ ಇರುವುದರಿಂದ ಅವರನ್ನು ಬಂಧಿಸುವುದು ತನಿಖಾ ಸಂಸ್ಥೆಯ "ಸ್ಪಷ್ಟ ಉದ್ದೇಶ"ವಾಗಿದೆ. ಹೀಗಾಗಿ ಅವರಿಗೆ ಬಲವಂತದ ಕ್ರಮದಿಂದ ರಕ್ಷಣೆಯ ಅಗತ್ಯವಿದೆ ಎಂದು ಹೇಳಿದರು.

SCROLL FOR NEXT