ಬಾಬಾ ರಾಮ್ ದೇವ್
ಬಾಬಾ ರಾಮ್ ದೇವ್ 
ದೇಶ

ಸುಪ್ರೀಂ ಕೋರ್ಟ್ ಮುಂದೆ ಪತಂಜಲಿ ಕಂಪನಿ ಬೇಷರತ್ ಕ್ಷಮೆಯಾಚನೆ!

Nagaraja AB

ನವದೆಹಲಿ: ಔಷಧಿಗಳ ಪರಿಣಾಮಕಾರಿತ್ವ ಕುರಿತು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ ಮುಂದೆ ಪತಂಜಲಿ ಆಯುರ್ವೇದ್ ಮತ್ತು ಅದರ ಎಂಡಿ ಆಚಾರ್ಯ ಬಾಲಕೃಷ್ಣ ಅವರು ಬೇಷರತ್ ಕ್ಷಮೆಯಾಚಿಸಿದ್ದಾರೆ. ಅದನ್ನು ಪುನರಾವರ್ತಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 2 ರಂದು ಬಾಬಾ ರಾಮದೇವ್ ಮತ್ತು ಬಾಲಕೃಷ್ಣ ಖುದ್ದು ಹಾಜರಾಗುವಂತೆ ಕೋರ್ಟ್ ಆದೇಶಿಸಿದೆ.

ಕಾನೂನು ಸುವ್ಯವಸ್ಥೆಗೆ ಅಪಾರ ಗೌರವ ಹೊಂದಿರುವುದಾಗಿ ಬಾಲಕೃಷ್ಣ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೇಳಿದ್ದಾರೆ. ಕ್ಷಮೆಯಾಚಿಸಿರುವ ಅವರು, ಕಂಪನಿಯು ಭವಿಷ್ಯದಲ್ಲಿ ಅಂತಹ ಜಾಹೀರಾತುಗಳನ್ನು ನೀಡುವುದಿಲ್ಲ ಎಂದು ಖಾತ್ರಿಪಡಿಸುವುದಾಗಿ ಹೇಳಿದ್ದಾರೆ.

ಆಯುರ್ವೇದ ಸಂಶೋಧನೆಯಿಂದ ಪೂರಕವಾದ ಮತ್ತು ಬೆಂಬಲಿತ ವಸ್ತುಗಳ ಬಳಕೆ ಸೇರಿದಂತೆ ಪತಂಜಲಿಯ ಉತ್ಪನ್ನಗಳನ್ನು ಸೇವಿಸುವ ಮೂಲಕ ಆರೋಗ್ಯಕರ ಜೀವನವನ್ನು ನಡೆಸಲು ಈ ದೇಶದ ನಾಗರಿಕರನ್ನು ಉತ್ತೇಜಿಸುವುದು" ಕಂಪನಿಯ ಉದ್ದೇಶವಾಗಿದೆ ಎಂದು ಬಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ.

ಸಂಸ್ಥೆಯ ಉತ್ಪನ್ನಗಳ ಜಾಹೀರಾತುಗಳು ಮತ್ತು ಅವುಗಳ ಔಷಧೀಯ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆಗೆ ನೀಡಲಾದ ನೋಟಿಸ್‌ಗೆ ಪ್ರತಿಕ್ರಿಯಿಸಲು ವಿಫಲವಾದ ನಂತರ ಸುಪ್ರೀಂ ಕೋರ್ಟ್ ಮಂಗಳವಾರ ಯೋಗ ಗುರು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಖುದ್ದು ಹಾಜರಾಗುವಂತೆ ಸೂಚಿಸಿದೆ.

SCROLL FOR NEXT