ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ online desk
ದೇಶ

ತಮಿಳುನಾಡು ರಾಜ್ಯಪಾಲರ ನಡೆ ಆತಂಕಕಾರಿ: ಸುಪ್ರೀಂ ಕೋರ್ಟ್

Srinivas Rao BV

ನವದೆಹಲಿ: ತಮಿಳುನಾಡು ರಾಜ್ಯಪಾಲರ ನಡೆ ಆತಂಕಕಾರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಡಿಎಂಕೆ ನಾಯಕ ಕೆ ಪೊನ್ಮುಡಿ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುವ ಸರ್ಕಾರದ ಪ್ರಸ್ತಾವನೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದರು. ಈ ವಿಷಯವಾಗಿ ಸುಪ್ರೀಂ ಕೋರ್ಟ್ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ಜೊತೆಗೆ ಈ ವಿಷಯವನ್ನು 24 ಗಂಟೆಗಳಲ್ಲಿ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ. ರಾಜ್ಯಪಾಲ ರವಿ ಅವರು ಸುಪ್ರೀಂ ಕೋರ್ಟ್ ಅನ್ನು ಧಿಕ್ಕರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ 3 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಪೊನ್ಮುಡಿ ವಿರುದ್ಧದ ತೀರ್ಪಿಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ತಡೆ ನೀಡಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಶಿಫಾರಸಿನ ಹೊರತಾಗಿಯೂ ಪೊನ್ಮುಡಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ರಾಜ್ಯಪಾಲರು ನಿರಾಕರಿಸಿದ್ದಾರೆ.

ಪೊನ್ಮುಡಿ ಅವರ ಮರುಸೇರ್ಪಡೆ ಸಾಂವಿಧಾನಿಕ ನೈತಿಕತೆಗೆ ವಿರುದ್ಧವಾಗಿರುತ್ತದೆ ಎಂದು ರಾಜ್ಯಪಾಲರು ಹೇಳುವುದಕ್ಕೆ ಹೇಗೆ ಸಾಧ್ಯ? ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಆಶ್ಚರ್ಯ ವ್ಯಕ್ತಪಡಿಸಿದೆ.

SCROLL FOR NEXT