ಅರವಿಂದ್ ಕೇಜ್ರಿವಾಲ್ 
ದೇಶ

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 6 ದಿನ ಇಡಿ ವಶಕ್ಕೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ 6 ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಶುಕ್ರವಾರ ಆದೇಶಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ 6 ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಶುಕ್ರವಾರ ಆದೇಶಿಸಿದೆ.

ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿತ್ತು. ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ, ಕೆಲ ಗಂಟೆಗಳ ಕಾಲ ಕೇಜ್ರಿವಾಲ್ ಅವರನ್ನು ವಿಚಾರಣೆ ಒಳಪಡಿಸಿ, ಬಳಿಕ ಬಂಧಿಸಿತ್ತು.

ಇಡಿ ಅಧಿಕಾರಿಗಳು ಇಂದು ಮಧ್ಯಾಹ್ನ ಕೇಜ್ರಿವಾಲ್ ಅವರನ್ನು ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 10 ದಿನ ತಮ್ಮ ವಶಕ್ಕೆ ನೀಡುವಂತೆ ಕೋರಿದರು.

ಆರೋಪಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು, ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 28ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ಇಡಿ ಪರವಾಗಿ ಎಎಸ್‌ಜಿ ಎಸ್‌ವಿ ರಾಜು ಅವರು ವಾದ ಮಂಡಿಸಿದರೆ, ಕೇಜ್ರಿವಾಲ್‌ ಅವರ ಪರವಾಗಿ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು ವಾದ ಮಂಡಿಸಿದರು.

ಈಗ ರದ್ದಾದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ