ನ್ಯಾಯಾಲಯದ ಮುಂದೆ ಹಾಜರಾದ ಕೇಜ್ರಿವಾಲ್ 
ದೇಶ

ಕೇಜ್ರಿವಾಲ್ ಅಬಕಾರಿ ಹಗರಣದ ಪ್ರಮುಖ ಸಂಚುಕೋರ: ದೆಹಲಿ ನ್ಯಾಯಾಲಯಕ್ಕೆ ED ಹೇಳಿಕೆ; 10 ದಿನ ಕಸ್ಟಡಿಗೆ ಮನವಿ

ಜಾರಿ ನಿರ್ದೇಶನಾಲಯ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇಲ್ಲಿನ ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 10 ದಿನಗಳ ಕಸ್ಟಡಿಗೆ ಕೋರಿದೆ.

ನವದೆಹಲಿ: ಜಾರಿ ನಿರ್ದೇಶನಾಲಯ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇಲ್ಲಿನ ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 10 ದಿನಗಳ ಕಸ್ಟಡಿಗೆ ಕೋರಿದೆ.

ಇಂದು ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ನ್ಯಾಯಾಲಯ ಆವರಣ ಹಾಗೂ ಸುತ್ತಮುತ್ತ ಬಿಗಿ ಭದ್ರತೆ ನಡುವೆ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಎಎಪಿ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲಾಯಿತು. ನಂತರ ನಾವು 10 ದಿನಗಳ ಕಸ್ಟಡಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿತು.

ಇಡಿ ಪರವಾಗಿ ಎಎಸ್‌ಜಿ ಎಸ್‌ವಿ ರಾಜು ವಾದ ಮಂಡಿಸಿದರೆ, ಕೇಜ್ರಿವಾಲ್‌ ಪರ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ. ಅಬಕಾರಿ ನೀತಿ ಪ್ರಕರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆಯಲ್ಲಿ ಜಾರಿ ನಿರ್ದೇಶನಾಲಯದ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಮನವಿಯನ್ನು ಹಿಂಪಡೆದ ಬೆನ್ನಲ್ಲೇ ಕೇಜ್ರಿವಾಲ್ ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT