ದೆಹಲಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣ  
ದೇಶ

ಎರಡು ದಿನಗಳ ಭೂತಾನ್ ಪ್ರವಾಸಕ್ಕೆ ಪ್ರಧಾನಿ ಮೋದಿ ಪ್ರಯಾಣ

ಇಂದು ಮುಂಜಾನೆ ದೆಹಲಿಯಿಂದ ನಿರ್ಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ: ತಮ್ಮ ಎರಡು ದಿನಗಳ ಭೂತಾನ್ ಪ್ರವಾಸಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಮುಂಜಾನೆ ದೆಹಲಿಯಿಂದ ತೆರಳಿದ್ದಾರೆ. ನಾಳೆ ಅವರು ವಾಪಸ್ಸಾಗಲಿದ್ದಾರೆ.

ಪೂರ್ವ ನಿಗದಿ ಪ್ರಕಾರ ನಿನ್ನೆಯೇ ಅವರು ಭೂತಾನ್ ಗೆ ತೆರಳಬೇಕಾಗಿತ್ತು. ಆದರೆ ಹಿಮಾಲಯ ಭಾಗದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಅವರ ಪ್ರವಾಸವನ್ನು ಒಂದು ದಿನ ಮುಂದೂಡಲಾಯಿತು.

ಪ್ರಧಾನಿಯವರ ಈ ಭೇಟಿಯು ಉಭಯ ದೇಶಗಳ ನಡುವಿನ ನಿಯಮಿತ ಉನ್ನತ ಮಟ್ಟದ ಮಾತುಕತೆಯನ್ನು ಮುಂದುವರಿಸುವ ಭಾಗವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಈ ಭೇಟಿಯು ಭಾರತ ಮತ್ತು ಭೂತಾನ್ ನಡುವಿನ ನಿಯಮಿತ ಉನ್ನತ ಮಟ್ಟದ ವಿನಿಮಯದ ಸಂಪ್ರದಾಯಕ್ಕೆ ಅನುಗುಣವಾಗಿದೆ ಮತ್ತು ಅದರ ನೆರೆಹೊರೆಯ ಮೊದಲ ನೀತಿಗೆ ಸರ್ಕಾರವು ಒತ್ತು ನೀಡಿದೆ ಎಂದು ಪ್ರಧಾನ ಮಂತ್ರಿಗಳ ಸಚಿವಾಲಯ ತಿಳಿಸಿದೆ.

ತಮ್ಮ ಎರಡು ದಿನಗಳ ಭೇಟಿಯಲ್ಲಿ ಪ್ರಧಾನಿಯವರು ಭೂತಾನ್‌ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್, ಮಾಜಿ ದೊರೆ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರನ್ನು ಭೇಟಿಯಾಗಲಿದ್ದಾರೆ. ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಅವರೊಂದಿಗೆ ಮೋದಿ ಚರ್ಚೆ ನಡೆಸಲಿದ್ದಾರೆ.

"ಭಾರತ ಮತ್ತು ಭೂತಾನ್ ಪರಸ್ಪರ ನಂಬಿಕೆ, ತಿಳುವಳಿಕೆ ಮತ್ತು ಸದ್ಭಾವನೆಯಲ್ಲಿ ಬೇರೂರಿರುವ ಅನನ್ಯ ಮತ್ತು ನಿರಂತರ ಪಾಲುದಾರಿಕೆಯನ್ನು ಹಂಚಿಕೊಳ್ಳುತ್ತವೆ. ನಮ್ಮ ಆಧ್ಯಾತ್ಮಿಕ ಪರಂಪರೆ ಮತ್ತು ಜನರ ನಡುವಿನ ಉತ್ತಮ ಸಂಬಂಧಗಳು ನಮ್ಮ ಅಸಾಧಾರಣ ಸಂಬಂಧಗಳಿಗೆ ಆಳ ಮತ್ತು ಚೈತನ್ಯವನ್ನು ಮೂಡಿಸುತ್ತದೆ.''

"ಈ ಭೇಟಿಯು ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಆಸಕ್ತಿಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ನಮ್ಮ ಜನರ ಅನುಕೂಲಕ್ಕಾಗಿ ನಮ್ಮ ಅನುಕರಣೀಯ ಪಾಲುದಾರಿಕೆಯನ್ನು ವಿಸ್ತರಿಸುವ ಮತ್ತು ತೀವ್ರಗೊಳಿಸುವ ಮಾರ್ಗಗಳ ಕುರಿತು ಉದ್ದೇಶಪೂರ್ವಕವಾಗಿ ಎರಡೂ ಕಡೆಯವರಿಗೆ ಅವಕಾಶವನ್ನು ಒದಗಿಸುತ್ತದೆ" ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಕಳೆದ ಫೆಬ್ರವರಿಯಲ್ಲಿ ಭೂತಾನ್‌ ಪ್ರಧಾನಿ ತ್ಶೆರಿಂಗ್ ಟೋಬ್‌ಗೇ ಅವರು ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ವಿದೇಶ ಪ್ರವಾಸದಲ್ಲಿ ಮೊನ್ನೆ ಅಂದರೆ ಮಾರ್ಚ್ 14 ರಿಂದ 18 ರವರೆಗೆ ಭಾರತಕ್ಕೆ ಭೇಟಿ ನೀಡಿ ಹೋಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT