ಕೆ ಪೊನ್ಮುಡಿ  
ದೇಶ

ಸುಪ್ರೀಂ ಕೋರ್ಟ್‌ ಛೀಮಾರಿ ನಂತರ ಪೊನ್ಮುಡಿಗೆ ಪ್ರಮಾಣ ವಚನ ಬೋಧಿಸಿದ ತಮಿಳುನಾಡು ರಾಜ್ಯಪಾಲ ರವಿ

ತಮಿಳುನಾಡು ನೂತನ ಸಚಿವರಾಗಿ ಡಿಎಂಕೆ ನಾಯಕ ಕೆ ಪೊನ್ಮುಡಿ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.

ಚೆನ್ನೈ: ತಮಿಳುನಾಡು ನೂತನ ಸಚಿವರಾಗಿ ಡಿಎಂಕೆ ನಾಯಕ ಕೆ ಪೊನ್ಮುಡಿ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.

ಈ ಸಂಬಂಧ ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶಿಸಿ ಛೀಮಾರಿ ಹಾಕಿದ ನಂತರ, ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಇಂದು ರಾಜಭವನದಲ್ಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಅವರ ಕೆಲವು ಸಂಪುಟ ಸಹೋದ್ಯೋಗಿಗಳ ಸಮ್ಮುಖದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೊನ್ಮುಡಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಸಮಾರಂಭದ ನಂತರ ಮಾತನಾಡಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು, ತಮಿಳುನಾಡು ಜನರ ಪರವಾಗಿ ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶಿಸಿ “ಸಂವಿಧಾನದ ಸ್ಫೂರ್ತಿಯನ್ನು ಎತ್ತಿಹಿಡಿದು ಪ್ರಜಾಪ್ರಭುತ್ವ ಉಳಿಸಿದ್ದಕ್ಕಾಗಿ” ಧನ್ಯವಾದಗಳನ್ನು ಅರ್ಪಿಸಿದರು.

ಪ್ರಜಾಪ್ರಭುತ್ವವನ್ನು ಉಳಿಸಲು 2024 ರ ಲೋಕಸಭೆ ಚುನಾವಣೆ ನಿರ್ಣಾಯಕವಾಗಿದ್ದು, "ನಮ್ಮ ವೈಭವದ ರಾಷ್ಟ್ರವನ್ನು ಹಾಳುಮಾಡುವ ಬೆದರಿಕೆ ಹಾಕುವ ಫ್ಯಾಸಿಸ್ಟ್ ಶಕ್ತಿಗಳಿಂದ ಅಧಿಕಾರದ ಲಜ್ಜೆಗೆಟ್ಟ ದುರುಪಯೋಗವನ್ನು ತಡೆಯಲು ನಾವು ಶ್ರಮಿಸೋಣ" ಎಂದು ಸ್ಟಾಲಿನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT