ಡಂಪರ್  
ದೇಶ

ಜಲ್ವಾರ್: ಐವರ ಮೇಲೆ ಡಂಪರ್‌ ಟ್ರಕ್‌ ಹರಿಸಿ ಭೀಕರ ಹತ್ಯೆ!

ಪೊಲೀಸ್ ಠಾಣೆಗೆ ದೂರು ನೀಡಲು ಹೊರಟ್ಟಿದ್ದ ಐವರನ್ನು ಡಂಪರ್ ಟ್ರಕ್ ಹರಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜಲ್ವಾರ್ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತರ ಪೈಕಿ ಇಬ್ಬರು ಸಹೋದರರು ಸೇರಿದ್ದಾರೆ. ಘಟನೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಜಲ್ವಾರ್ : ಪೊಲೀಸ್ ಠಾಣೆಗೆ ದೂರು ನೀಡಲು ಹೊರಟ್ಟಿದ್ದ ಐವರನ್ನು ಡಂಪರ್ ಟ್ರಕ್ ಹರಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜಲ್ವಾರ್ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತರ ಪೈಕಿ ಇಬ್ಬರು ಸಹೋದರರು ಸೇರಿದ್ದಾರೆ. ಘಟನೆಯ ಬಳಿಕ ಆರೋಪಿಗಳು ಡಂಪರ್ ಅಲ್ಲಿಯೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ.

ತಡರಾತ್ರಿ ಯಾವುದೋ ವಿಚಾರಕ್ಕೆ ಎರಡು ಗುಂಪಿಗಳ ನಡುವೆ ಜಗಳ ನಡೆದಿದೆ. ವಿವಾದಕ್ಕೆ ಕಾರಣ ತಿಳಿದುಬಂದಿಲ್ಲ, ಇಬ್ಬರು ಸಹೋದರರು ಸೇರಿದಂತೆ ಐವರು ಪೋಲಿಸ್ ಠಾಣೆಗೆ ದೂರು ದಾಖಲಿಸುವುದಾಗಿ ಎರಡು ಮೋಟಾರು ಸೈಕಲ್ ನಲ್ಲಿ ಹೊರಟ್ಟಿದ್ದರು. ಇವರನ್ನು ತಡೆದ ಆರೋಪಿಗಳು ಡಂಪರ್‌ ಟ್ರಕ್​ ನ್ನು ಮೋಟಾರ್ ಸೈಕಲ್ ಮೇಲೆ ಹರಿಸಿ, ಸ್ಥಳದಲ್ಲಿಯೇ ನಾಲ್ವರನ್ನು ಹತ್ಯೆ ಮಾಡಿದ್ದಾರೆ.ಗಾಯಗೊಂಡಿದ್ದ ಮತ್ತೋರ್ವ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾನೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ ಪಗಾರಿಯಾ ಠಾಣಾಧಿಕಾರಿ ವಿಜಯೇಂದ್ರ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ವಿವಾದದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ,ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ ಎಂದು ಸರ್ಕಲ್ ಆಫೀಸರ್ ಪ್ರೇಮ್ ಕುಮಾರ್ ತಿಳಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಎಸ್‌ಎಚ್‌ಒ ವಿಜೇಂದ್ರ ಸಿಂಗ್ ಹೇಳಿದ್ದಾರೆ. ಮೃತಪಟ್ಟವರು ದಿನಗೂಲಿ ಕಾರ್ಮಿಕರಾಗಿದ್ದು, ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT