ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್  
ದೇಶ

ಕಸ್ಟಡಿಯಲ್ಲಿರುವ ಕೇಜ್ರಿವಾಲ್ ಗೆ ಕಂಪ್ಯೂಟರ್ ಅಥವಾ ಕಾಗದ ನೀಡಿಲ್ಲ: ಜಾರಿ ನಿರ್ದೇಶನಾಲಯ

Srinivas Rao BV

ನವದೆಹಲಿ: ಬಂಧನಕ್ಕೆ ಒಳಗಾಗಿರುವ ಅರವಿಂದ್ ಕೇಜ್ರಿವಾಲ್ ಗೆ ಕಂಪ್ಯೂಟರ್ ಅಥವಾ ಪೇಪರ್ ಗಳನ್ನು ನೀಡಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ದೆಹಲಿ ಸಚಿವೆ ಅತಿಶಿ ಲಾಕ್ ಅಪ್ ನಿಂದ ಕೇಜ್ರಿವಾಲ್ ಅವರ ಮೊದಲ ಆದೇಶದ ಬಗ್ಗೆ ಮಾತನಾಡಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಈ ಸ್ಪಷ್ಟನೆ ನೀಡಿದೆ.

ಗುರುವಾರದಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮಾ.28 ವರೆಗೆ ನ್ಯಾಯಾಲಯ ಕೇಜ್ರಿವಾಲ್ ನ್ನು ತನಿಖಾ ಸಂಸ್ಥೆಯ ಕಸ್ಟಡಿಗೆ ಒಪ್ಪಿಸಿದೆ.

ದೆಹಲಿಯ ಜಲ ಸಚಿವ ಅತಿಶಿ ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ, ರಾಷ್ಟ್ರ ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ನೀರು ಮತ್ತು ಒಳಚರಂಡಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ಸೂಚನೆ ನೀಡಿ, ನಗರ ಸರ್ಕಾರವನ್ನು ನಡೆಸುವ ಬಗ್ಗೆ ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಕೇಜ್ರಿವಾಲ್ ಅವರು ತಮ್ಮ ಮೊದಲ ನಿರ್ದೇಶನವನ್ನು ನೀಡಿದ್ದಾರೆ ಎಂದು ಹೇಳಿದ್ದರು.

ಇ.ಡಿ ಕೇಂದ್ರ ಕಚೇರಿಯಿಂದ ಅರವಿಂದ್ ಕೇಜ್ರಿವಾಲ್ ಅವರಿಗೆ ಯಾವುದೇ ಕಂಪ್ಯೂಟರ್ ಅಥವಾ ಕಾಗದವನ್ನು ನೀಡಲಾಗಿಲ್ಲ ಎಂದು ಮೂಲಗಳು ಹೇಳಿವೆ. "ನಾವು ಸಚಿವೆಯ ಹೇಳಿಕೆ ಕುರಿತು ತನಿಖೆ ಮಾಡುತ್ತಿದ್ದೇವೆ" ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT