ವೈಎಸ್ ಜಗನ್ ಮೋಹನ್ ರೆಡ್ಡಿ
ವೈಎಸ್ ಜಗನ್ ಮೋಹನ್ ರೆಡ್ಡಿ PTI
ದೇಶ

ಆಂಧ್ರ ವಿಧಾನಸಭೆ ಚುನಾವಣೆ: ಜಗನ್ ಪಕ್ಷಕ್ಕೆ ದೊಡ್ಡ ಹೊಡೆತ; YSRCP ತೊರೆದ ಇಬ್ಬರು ಶಾಸಕರು!

Vishwanath S

ಅಮರಾವತಿ: ಲೋಕಸಭೆ ಚುನಾವಣೆಗೂ ಮುನ್ನ ವೈಎಸ್‌ಆರ್‌ಸಿಪಿ ಭಾರಿ ಹಿನ್ನಡೆಯಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ವೈಎಸ್‌ಆರ್‌ಸಿಪಿಯ ಇಬ್ಬರು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಶಾಸಕರಾದ ವುನ್ನಮಟ್ಲಾ ಎಲಿಜಾ ಮತ್ತು ವಿ ವರಪ್ರಸಾದ್ ರಾವ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಚಿಂತಲಪುಡಿ ವಿಧಾನಸಭಾ ಕ್ಷೇತ್ರದ ಶಾಸಕಿ ವುನ್ನಮಟಾಲ ಎಲಿಜಾ ಅವರು ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ವೈಎಸ್‌ಆರ್‌ಸಿಪಿ ಅಭ್ಯರ್ಥಿಗಳ ದೊಡ್ಡ ಪ್ರಮಾಣದ ಬದಲಾವಣೆಯನ್ನು ಪಕ್ಷದ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮಾಡಿದ್ದಾರೆ. ಚಿಂತಲಪುಡಿ ಕ್ಷೇತ್ರದಿಂದ ಕಂಬಂ ವಿಜಯರಾಜು ಅವರಿಗೆ ಟಿಕೆಟ್ ನೀಡಿದ್ದಾರೆ. ಇದಲ್ಲದೇ ಜಗನ್ ಮೋಹನ್ ರೆಡ್ಡಿ ನೇತೃತ್ವದ ಪಕ್ಷಕ್ಕೆ ವರಪ್ರಸಾದ್ ರಾವ್ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ವೈಎಸ್‌ಆರ್‌ಸಿಪಿ ವರಪ್ರಸಾದ್‌ ರಾವ್‌ಗೆ ಟಿಕೆಟ್‌ ನೀಡದ ಹಿನ್ನೆಲೆಯಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ ವರಿಷ್ಠರು ಹಲವು ಶಾಸಕರಿಗೆ ಟಿಕೆಟ್‌ ನಿರಾಕರಿಸಿದ್ದಾರೆ. 81 ವಿಧಾನಸಭೆ ಹಾಗೂ 18 ಲೋಕಸಭೆ ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳಿಗೆ ಅವಕಾಶ ನೀಡಿದ್ದಾರೆ. 175 ವಿಧಾನಸಭಾ ಸ್ಥಾನಗಳು ಮತ್ತು 25 ಲೋಕಸಭಾ ಸ್ಥಾನಗಳನ್ನು ಒಳಗೊಂಡಿರುವ ಆಂಧ್ರ ಪ್ರದೇಶ ವಿಧಾನಸಭೆಗೆ ಮೇ 13ರಂದು ಚುನಾವಣೆ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

SCROLL FOR NEXT