ಸಾಂದರ್ಭಿಕ ಚಿತ್ರ 
ದೇಶ

ಲೋಕಸಭೆ ಚುನಾವಣೆ: ಕಾಂಗ್ರೆಸ್ ನಿಂದ ಐವರು ಅಭ್ಯರ್ಥಿಗಳ ಆರನೇ ಪಟ್ಟಿ ಬಿಡುಗಡೆ

ಲೋಕಸಭೆ ಚುನಾವಣೆಗೆ ರಾಜಸ್ಥಾನ ಮತ್ತು ತಮಿಳುನಾಡಿನ ಕ್ಷೇತ್ರಗಳಿಗೆ ಕಾಂಗ್ರೆಸ್ ಸೋಮವಾರ ತನ್ನ ಐವರು ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ನವದೆಹಲಿ: ಲೋಕಸಭೆ ಚುನಾವಣೆಗೆ ರಾಜಸ್ಥಾನ ಮತ್ತು ತಮಿಳುನಾಡಿನ ಕ್ಷೇತ್ರಗಳಿಗೆ ಕಾಂಗ್ರೆಸ್ ಸೋಮವಾರ ತನ್ನ ಐವರು ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ರಾಜಸ್ಥಾನದ ನಾಲ್ವರು ಮತ್ತು ತಮಿಳುನಾಡಿನ ಒಬ್ಬ ಅಭ್ಯರ್ಥಿಯ ಪಟ್ಟಿಯನ್ನು ಇಂದು ಘೋಷಿಸಿದೆ.

ರಾಜಸ್ಥಾನದಲ್ಲಿ, ಪಕ್ಷವು ಅಜ್ಮೀರ್ ಲೋಕಸಭಾ ಕ್ಷೇತ್ರದಿಂದ ರಾಮಚಂದ್ರ ಚೌಧರಿ, ರಾಜಸಮಂದ್‌ನಿಂದ ಸುದರ್ಶನ್ ರಾವತ್, ಭಿಲ್ವಾರಾದಿಂದ ದಾಮೋದರ್ ಗುರ್ಜಾರ್ ಅವರನ್ನು ಕಣಕ್ಕಿಳಿಸಿದೆ. ಕೋಟಾ ಕ್ಷೇತ್ರದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಪ್ರಹ್ಲಾದ್ ಗುಂಜಾಲ್ ಅವರನ್ನು ಕಣಕ್ಕಿಳಿಸಿದೆ.

ರಾಜಸ್ಥಾನ 25 ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಂತ 1(ಏಪ್ರಿಲ್ 19) 12 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಉಳಿದ 13 ಸ್ಥಾನಗಳಿಗೆ ಎರಡನೇ ಹಂತದಲ್ಲಿ (ಏಪ್ರಿಲ್ 26) ಮತದಾನ ನಡೆಯಲಿದೆ.

ಇನ್ನು ತಮಿಳುನಾಡಿನ ತಿರುನಲ್ವೇಲಿ ಕ್ಷೇತ್ರದಿಂದ ಸಿ ರಾಬರ್ಟ್ ಬ್ರೂಸ್ ಅವರಿಗೆ ಕಾಂಗ್ರೆಸ್ ಟಿಕೆಟ್‌ ನೀಡಿದೆ. ತಮಿಳುನಾಡಿನ ಎಲ್ಲಾ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ