ಜೆಪಿ ನಡ್ಡಾ 
ದೇಶ

ದೆಹಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪತ್ನಿಗೆ ಸೇರಿದ ಎಸ್‌ಯುವಿ ಕಳ್ಳತನ

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಹೆಸರಿನಲ್ಲಿ ನೋಂದಾಯಿಸಲಾದ ಎಸ್‌ಯುವಿ ದಕ್ಷಿಣ ದೆಹಲಿಯಿಂದ ಕಳವಾಗಿದೆ ಎಂದು ವರದಿಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ನವದೆಹಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಹೆಸರಿನಲ್ಲಿ ನೋಂದಾಯಿಸಲಾದ ಎಸ್‌ಯುವಿ ದಕ್ಷಿಣ ದೆಹಲಿಯಿಂದ ಕಳವಾಗಿದೆ ಎಂದು ವರದಿಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ವಾಹನದ ಚಾಲಕ ಜೋಗಿಂದರ್ ಎಂಬುವವರು ಬಿಳಿ ಟೊಯೊಟಾ ಫಾರ್ಚೂನರ್ ಅನ್ನು ಗೋವಿಂದಪುರಿಯಲ್ಲಿನ ಸೇವಾ ಕೇಂದ್ರದಲ್ಲಿ ಬಿಟ್ಟಿದ್ದಾಗ ಮಾರ್ಚ್ 19 ರಂದು ಘಟನೆ ನಡೆದಿದೆ.

ಚಾಲಕ ವಾಹನವನ್ನು ಅಲ್ಲಿ ಬಿಟ್ಟು ಮನೆಗೆ ಹಿಂದಿರುಗಿದ ನಂತರ ವಾಹನ ಕಾಣೆಯಾಗಿದೆ. ಕೂಡಲೇ ಎಫ್‌ಐಆರ್‌ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.

'ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ವಾಹನವು ಕೊನೆಯದಾಗಿ ಗುರುಗ್ರಾಮದ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವ್ಯಾಪಕ ಪ್ರಯತ್ನಗಳ ಹೊರತಾಗಿಯೂ, ಕದ್ದ ಕಾರನ್ನು ಪತ್ತೆಹಚ್ಚುವಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಜೆಪಿ ನಡ್ಡಾ ಅವರ ಪತ್ನಿ ಹೆಸರಿನಲ್ಲಿ ಹಿಮಾಚಲ ಪ್ರದೇಶದಲ್ಲಿ ಈ ವಾಹನ ನೋಂದಣಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಪೊಲೀಸರು ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್