ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ Online desk
ದೇಶ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ತಮಿಳುನಾಡು ಸಚಿವರ ವಿರುದ್ಧ ಪ್ರಕರಣ

Srinivas Rao BV

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ತಮಿಳುನಾಡಿನ ಮೀನುಗಾರಿಕಾ ಸಚಿವರಾದ ಅನಿತಾ ರಾಧಾಕೃಷ್ಣನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ನಡೆದ ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರಧಾನಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಸಚಿವರ ವಿರುದ್ಧ ಕೇಳಿಬಂದಿದೆ. ಸೆಕ್ಷನ್ 294 ಬಿ (ಸಾರ್ವಜನಿಕವಾಗಿ ಅಶ್ಲೀಲ ಶಬ್ದಗಳ ಬಳಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಚಿವರ ವಿರುದ್ಧ ಬಿಜೆಪಿ ತೂತುಕುಡಿ ದಕ್ಷಿಣ ಜಿಲ್ಲಾಧ್ಯಕ್ಷ ಆರ್ ಸಿಧ್ರಾಂಗತನ್ ಎಂಬುವವರು ದೂರು ದಾಖಲಿಸಿದ್ದರು.

ಕೂಡಲೇ ರಾಜ್ಯ ಸಚಿವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಪತಿ ಅವರಿಗೆ ದೂರು ನೀಡಿದ್ದು, ಪೊಲೀಸರು ಭಾನುವಾರ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ. ರಾಧಾಕೃಷ್ಣನ್ ಅವರ ಮಾತು ಅಸಹ್ಯಕರ ಮತ್ತು ಹೇಯವಾಗಿದ್ದು, ದಿವಂಗತ ಮುಖ್ಯಮಂತ್ರಿ ಕಾಮರಾಜ್ ಅವರನ್ನು ಶ್ಲಾಘಿಸಲು ಪ್ರಧಾನಿಯನ್ನು ಟೀಕಿಸಿದ್ದಾರೆ ಎಂದು ಸಿಧ್ರಾಂಗತನ್ ಹೇಳಿದ್ದಾರೆ.

ಏತನ್ಮಧ್ಯೆ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಅವರು ಮುಖ್ಯ ಚುನಾವಣಾಧಿಕಾರಿ ಸತ್ಯಬ್ರತ ಸಾಹೂ ಅವರಿಗೆ ನೀಡಿದ ದೂರಿನಲ್ಲಿ, ಪ್ರಧಾನಿ ವಿರುದ್ಧ "ನೀಚ ಪದ" ಬಳಸಿರುವ ರಾಧಾಕೃಷ್ಣನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

SCROLL FOR NEXT