ಕೆ. ಕವಿತಾ 
ದೇಶ

ಬಿಆರ್‌ಎಸ್‌ ನಾಯಕಿ ಕವಿತಾಗೆ 14 ದಿನಗಳ ನ್ಯಾಯಾಂಗ ಬಂಧನ

ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಅವರನ್ನು ನವದೆಹಲಿಯ ನ್ಯಾಯಾಲಯ ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಕಸ್ಟಡಿ ವಿಚಾರಣೆ ವಿಸ್ತರಿಸಲು ಜಾರಿ ನಿರ್ದೇಶನಾಲಯ (ಇಡಿ) ಕೋರದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಆದೇಶ ಹೊರಡಿಸಿದ್ದಾರೆ.

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಅವರನ್ನು ನವದೆಹಲಿಯ ನ್ಯಾಯಾಲಯ ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಕಸ್ಟಡಿ ವಿಚಾರಣೆ ವಿಸ್ತರಿಸಲು ಜಾರಿ ನಿರ್ದೇಶನಾಲಯ (ಇಡಿ) ಕೋರದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಆದೇಶ ಹೊರಡಿಸಿದ್ದಾರೆ.

ಮಾರ್ಚ್ 16 ರಂದು ಏಳು ದಿನಗಳ ಇಡಿ ಕಸ್ಟಡಿಗೆ ಕವಿತಾ ಅವರನ್ನು ಒಪ್ಪಿಸಲಾಗಿತ್ತು. ಕಳೆದ ಶನಿವಾರ ಅದನ್ನು ಮೂರು ದಿನಗಳವರೆಗೆ ವಿಸ್ತರಿಸಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ ಅಪ್ರಾಪ್ತ ಮಗನ ಪರೀಕ್ಷೆಯ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡುವಂತೆ ಕವಿತಾ ಪರ ವಕೀಲ ನಿತೇಶ್ ರಾಣಾ ಕೋರಿದರು. ಮಧ್ಯಂತರ ಜಾಮೀನನ್ನು ಪರಿಗಣಿಸಬೇಕಿದ್ದರೂ ಉತ್ತರ ಸಲ್ಲಿಸಲು ಅವಕಾಶ ನೀಡಬೇಕು ಎಂದು ಇಡಿ ಪರ ವಕೀಲರು ಹೇಳಿದರು. ಮಧ್ಯಂತರ ಮತ್ತು ನಿಯಮಿತ ಜಾಮೀನು ಎರಡಕ್ಕೂ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕಠಿಣ ನಿಬಂಧನೆಗಳಿವೆ ಎಂದು ಇಡಿ ಹೇಳಿತು.

ದೆಹಲಿ ಅಬಕಾರಿ ನೀತಿಯಲ್ಲಿ ದೊಡ್ಡ ಪಾಲಿಗಾಗಿ ಎಎಪಿಗೆ 100 ಕೋಟಿ ರೂ. ಕಿಕ್ ಬ್ಯಾಕ್ ಪಾವತಿಯಲ್ಲಿ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು 'ಸೌತ್ ಗ್ರೂಪ್' ನ ಪ್ರಮುಖ ಸದಸ್ಯೆಯಾಗಿದ್ದಾರೆ ಎಂದು ಇಡಿ ಆರೋಪಿಸಿದೆ. 14 ವರ್ಷದ ಕವಿತಾ ಅವರನ್ನು ಮಾರ್ಚ್ 15 ರಂದು ಕೇಂದ್ರ ತನಿಖಾ ಸಂಸ್ಥೆ ಬಂಧಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT