ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ 
ದೇಶ

1996 ರ ಕೇಸ್, ವಕೀಲರನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಲು ಸಂಚು: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್‌ಗೆ 20 ವರ್ಷ ಜೈಲು ಶಿಕ್ಷೆ

ವಕೀಲರೊಬ್ಬರನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ 1996ರ ಕೇಸ್ ವೊಂದರಲ್ಲಿ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಪಾಲನ್‌ಪುರದ ಸೆಷನ್ಸ್ ನ್ಯಾಯಾಲಯವು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಪಾಲನ್‌ಪುರ: ವಕೀಲರೊಬ್ಬರನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ 1996ರ ಕೇಸ್ ವೊಂದರಲ್ಲಿ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಪಾಲನ್‌ಪುರದ ಸೆಷನ್ಸ್ ನ್ಯಾಯಾಲಯವು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಈಗಾಗಲೇ ಕಸ್ಟಡಿ ಸಾವಿನ ಪ್ರಕರಣದಲ್ಲಿ ಜೈಲು ಸೇರಿರುವ ಭಟ್, 1996 ರಲ್ಲಿ ವಕೀಲರೊಬ್ಬರು ತಂಗಿದ್ದ ಪಾಲನ್‌ಪುರದ ಹೋಟೆಲ್ ಕೊಠಡಿಯಿಂದ ಪೊಲೀಸರು ಡ್ರಗ್ಸ್ ವಶಕ್ಕೆ ಪಡೆದಿರುವುದಾಗಿ ಸುಳ್ಳು ಆರೋಪ ಮಾಡಿದ್ದರಿಂದ ರಾಜಸ್ಥಾನ ಮೂಲದ ವಕೀಲರನ್ನು ದೋಷಿ ಎಂದು ಪರಿಗಣಿಸಲಾಗಿತ್ತು.

2015ರಲ್ಲಿ ಪಡೆಯಿಂದ ವಜಾಗೊಂಡ ಭಟ್ ಅವರು ಆ ಸಮಯದಲ್ಲಿ ಬನಸ್ಕಾಂತ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜೆ ಎನ್ ಠಕ್ಕರ್ ಅವರು ಬುಧವಾರ ಎನ್‌ಡಿಪಿಎಸ್ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಭಟ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

SCROLL FOR NEXT