ಸಿಎಂ ಏಕನಾಥ್ ಶಿಂಧೆ ಅವರೊಂದಿಗೆ ನಟ ಗೋವಿಂದ 
ದೇಶ

ಸಿಎಂ ಏಕನಾಥ್ ಶಿಂಧೆ ಸಮ್ಮುಖದಲ್ಲಿ ನಟ ಗೋವಿಂದ ಶಿವಸೇನೆ ಸೇರ್ಪಡೆ!

ಬಾಲಿವುಡ್ ಹಿರಿಯ ನಟ ಗೋವಿಂದ ಶಿವಸೇನೆ ಸೇರಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಗೋವಿಂದ, ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಮುಂಬೈ: ಬಾಲಿವುಡ್ ಹಿರಿಯ ನಟ ಗೋವಿಂದ ಶಿವಸೇನೆ ಸೇರಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಗೋವಿಂದ, ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಈ ತಿಂಗಳ ಆರಂಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಅವರೊಂದಿಗೆ ಗೋವಿಂದ ಸಭೆ ನಡೆಸಿದ್ದರು. ಕಳೆದ ವಾರ ನಡೆದ ಈ ಸಭೆಯ ಸಂದರ್ಭದಲ್ಲಿ ಅವರ ರಾಜಕೀಯಕ್ಕೆ ಮರಳುವ ವದಂತಿಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಗೋವಿಂದ ರಾಜಕೀಯ ಕ್ಷೇತ್ರಕ್ಕೆ ಹೊಸಬರಲ್ಲ. 2004 ರಲ್ಲಿ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರಕ್ಕೆ ಯಶಸ್ವಿಯಾಗಿ ಸ್ಪರ್ಧಿಸುವ ಮೂಲಕ ಹಿರಿಯ ಬಿಜೆಪಿ ನಾಯಕ ರಾಮ್ ನಾಯಕ್ ಅವರನ್ನು ಸೋಲಿಸಿದ್ದರು. ಆದರೆ, ಬಳಿಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ