300 ಅಡಿ ಆಳದ ಕಮರಿಗೆ ಉರುಳಿದ ಎಸ್‌ಯುವಿ 
ದೇಶ

ಜಮ್ಮು ಮತ್ತು ಕಾಶ್ಮೀರ: 300 ಅಡಿ ಆಳದ ಕಮರಿಗೆ ಬಿದ್ದ ಎಸ್‌ಯುವಿ; 10 ಮಂದಿ ದಾರುಣ ಸಾವು

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಎಸ್‌ಯುವಿ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವಿಗೀಡಾಗಿರುವ ಘಟನೆ ರಾಂಬನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬನಿಹಾಲ್/ಜಮ್ಮು: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಎಸ್‌ಯುವಿ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವಿಗೀಡಾಗಿರುವ ಘಟನೆ ರಾಂಬನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಹನವು ಶ್ರೀನಗರದಿಂದ ಜಮ್ಮುವಿಗೆ ತೆರಳುತ್ತಿತ್ತು ಮತ್ತು ಅದು ಜಿಲ್ಲೆಯ ಬ್ಯಾಟರಿ ಚೆಶ್ಮಾ ಪ್ರದೇಶದಲ್ಲಿ 1.15 ರ ಸುಮಾರಿಗೆ 300 ಅಡಿ ಆಳದ ಕಮರಿಗೆ ಬಿದ್ದಿದೆ. ಘಟನೆಯಲ್ಲಿ ಹತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.

ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ಸ್ಥಳದಲ್ಲಿದ್ದಾರೆ.

ಭಾರಿ ಮಳೆಯ ನಡುವೆಯೇ 10 ಪ್ರಯಾಣಿಕರ ಮೃತದೇಹಗಳನ್ನು ಕಮರಿಯಿಂದ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರಿನ ಚಾಲಕ ಜಮ್ಮುವಿನ ಅಂಬ್ ಘೋಥಾದ ಬಲ್ವಾನ್ ಸಿಂಗ್ (47) ಮತ್ತು ಬಿಹಾರದ ಪಶ್ಚಿಮ ಚಂಪಾರಣ್‌ನ ವಿಪಿನ್ ಮುಖಿಯಾ ಭೈರಗಾಂಗ್ ಮೃತಪಟ್ಟವರಲ್ಲಿ ಸೇರಿದ್ದಾರೆ ಎಂದು ಅವರು ಹೇಳಿದರು.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ