ಬಿಲ್ ಗೇಟ್ಸ್ ಜೊತೆ ಪ್ರಧಾನಿ ಮೋದಿ ಸಂವಾದ  
ದೇಶ

ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದು: ಬಿಲ್ ಗೇಟ್ಸ್ ಜೊತೆ ಸಂವಾದದಲ್ಲಿ ಪ್ರಧಾನಿ ಮೋದಿ

ಲೋಕೋಪಕಾರಿ ಮತ್ತು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರೊಂದಿಗೆ ದೆಹಲಿಯ ತಮ್ಮ ನಿವಾಸದಲ್ಲಿ ನಡೆಸಿದ ಸಂವಾದದಲ್ಲಿ ಅವರು, ಜಗತ್ತಿನಲ್ಲಿ ಡಿಜಿಟಲ್ ವಿಭಜನೆಯ ಬಗ್ಗೆ ಕೇಳುತ್ತಿದ್ದೇನೆ. ಭಾರತದಲ್ಲಿ ಇದು ಸಂಭವಿಸಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಕೃಷಿ, ಶಿಕ್ಷಣ ಮತ್ತು ಆರೋಗ್ಯ ಈ ಮೂರು ಕ್ಷೇತ್ರಗಳಲ್ಲಿ ತಂತ್ರಜ್ಞಾನವು ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕ್ಷೇತ್ರಗಳಲ್ಲಿ ತಮ್ಮ ಸರ್ಕಾರದ ಪ್ರಯತ್ನಗಳನ್ನು ಎತ್ತಿ ತೋರಿಸಿದ್ದಾರೆ.

ಲೋಕೋಪಕಾರಿ ಮತ್ತು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರೊಂದಿಗೆ ದೆಹಲಿಯ ತಮ್ಮ ನಿವಾಸದಲ್ಲಿ ನಡೆಸಿದ ಸಂವಾದದಲ್ಲಿ ಅವರು, ಜಗತ್ತಿನಲ್ಲಿ ಡಿಜಿಟಲ್ ವಿಭಜನೆಯ ಬಗ್ಗೆ ಕೇಳುತ್ತಿದ್ದೇನೆ. ಭಾರತದಲ್ಲಿ ಇದು ಸಂಭವಿಸಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಗರ್ಭಕಂಠದ ಕ್ಯಾನ್ಸರ್‌ ಗೆ ಕನಿಷ್ಠ ವೆಚ್ಚದಲ್ಲಿ ಲಸಿಕೆಗಳ ಅಭಿವೃದ್ಧಿ: ಗರ್ಭಕಂಠದ ಕ್ಯಾನ್ಸರ್‌ ಗೆ ಕನಿಷ್ಠ ವೆಚ್ಚದಲ್ಲಿ ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಸ್ಥಳೀಯ ಸಂಶೋಧನೆಗಾಗಿ ವಿಜ್ಞಾನಿಗಳಿಗೆ ಹಣವನ್ನು ವಿನಿಯೋಗಿಸಲು ಮುಂದೆ ಬರಲಿರುವ ತಮ್ಮ ಹೊಸ ಸರ್ಕಾರವು ವಿಶೇಷವಾಗಿ ಎಲ್ಲಾ ವರ್ಗದ ಹುಡುಗಿಯರಿಗೆ ಲಸಿಕೆಯನ್ನು ನೀಡಲು ಶ್ರಮವಹಿಸುತ್ತದೆ ಎಂದಿದ್ದಾರೆ.

ಸಾರ್ವತ್ರಿಕ ಚುನಾವಣೆಯ ನಂತರ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳುವ ವಿಶ್ವಾಸವನ್ನು ಮೋದಿ ವ್ಯಕ್ತಪಡಿಸಿದ್ದಾರೆ. ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಅಗತ್ಯವಿದೆ, ಭಾರತವು ಈ ನಿಟ್ಟಿನಲ್ಲಿ ಮುನ್ನಡೆಯಲಿದೆ ಎಂದು ಹೇಳಿದರು.

ಹವಾಮಾನ ಬದಲಾವಣೆಯ ವಿಷಯದ ಕುರಿತು ಮಾತನಾಡಿದ ಮೋದಿ, ಅಭಿವೃದ್ಧಿಯನ್ನು ಹವಾಮಾನ ವಿರೋಧಿ ಎಂದು ವ್ಯಾಖ್ಯಾನಿಸಲು ಜಗತ್ತು ವಿದ್ಯುತ್ ಅಥವಾ ಉಕ್ಕಿನಂತಹ ನಿಯತಾಂಕಗಳನ್ನು ಬದಲಾಯಿಸಬೇಕಾಗಿದೆ. ಹಸಿರು ಜಿಡಿಪಿ ಮತ್ತು ಹಸಿರು ಉದ್ಯೋಗದಂತಹ ಪರಿಭಾಷೆಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ವಿಷಯದ ಕುರಿತು ಚರ್ಚಿಸಿದ ಅವರು, ಇದನ್ನು ಮಾಂತ್ರಿಕ ಸಾಧನವಾಗಿ ಅಥವಾ ಕೆಲವು ಕೆಲಸಗಳನ್ನು ಮಾಡಲು ಜನರ ಬದಲಿಗೆ ಸೋಮಾರಿ ಸಾಧನವಾಗಿ ನೋಡಬಾರದು ಎಂದಿದ್ದಾರೆ.

ಜಿ 20 ಶೃಂಗಸಭೆಯಲ್ಲಿ ಭಾಷಣಗಳನ್ನು ಭಾಷಾಂತರಿಸಲು ಮತ್ತು ಹಲವಾರು ಕಾರ್ಯಕ್ರಮಗಳಲ್ಲಿ ವಿವಿಧ ಭಾಷೆಗಳಲ್ಲಿ ಅನುವಾದ ಮಾಡಲು ಹೇಗೆ AI ಯನ್ನು ಬಳಸಿಕೊಳ್ಳಲಾಯಿತು. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹೇಗೆ ನೆರವಿಗೆ ಬಂದು ಎಂಬುದನ್ನು ಸಹ ಪ್ರಧಾನಿ ವಿವರಿಸಿದರು.

ನಿರಂತರವಾಗಿ ತನ್ನನ್ನು ತಾನು ಸುಧಾರಿಸಿಕೊಳ್ಳಲು ಚಾಟ್‌ಜಿಪಿಟಿಯಂತಹ ತಂತ್ರಜ್ಞಾನವನ್ನು ಬಳಸಬೇಕು ಎಂದು ಅವರು ಹೇಳಿದರು.

ತಂತ್ರಜ್ಞಾನದ ದಾಸನಲ್ಲ: AI ಬಳಕೆಯನ್ನು ಉಲ್ಲೇಖಿಸಿದ ಮೋದಿಯವರು, ತಮ್ಮ (NaMo) ಅಪ್ಲಿಕೇಶನ್‌ನ ಮೂಲಕ ಸೆಲ್ಫಿ ತೆಗೆದುಕೊಳ್ಳಲು ಬಿಲ್ ಗೇಟ್ಸ್ ಅವರನ್ನು ಕೇಳಿಕೊಂಡರು. ಫೇಸ್-ರೆಕಗ್ನಿಷನ್ ತಂತ್ರಜ್ಞಾನದ ಮೂಲಕ ಹೇಗೆ ಕಂಡುಹಿಡಿಯಬಹುದು ಎಂಬುದನ್ನು ತೋರಿಸಿದರು.

ತಂತ್ರಜ್ಞಾನದ ಪ್ರಜಾಪ್ರಭುತ್ವೀಕರಣದಲ್ಲಿ ನನಗೆ ನಂಬಿಕೆಯಿದೆ, ಅದು ಎಲ್ಲರಿಗೂ ಸಮಾನ ಅವಕಾಶವನ್ನು ನೀಡುತ್ತದೆ. ತಂತ್ರಜ್ಞಾನವನ್ನು ಹಳ್ಳಿಗಳಿಗೆ ಕೊಂಡೊಯ್ಯಬೇಕಾಗಿದೆ ಎಂದು ಸಹ ಹೇಳಿದರು. ತಾವು ತಂತ್ರಜ್ಞಾನಕ್ಕೆ ಆಕರ್ಷಿತನಾದರೂ ಕೂಡ ಅದರ ದಾಸನಲ್ಲ. ನಾನು ಪರಿಣಿತನಲ್ಲ ಆದರೆ ತಂತ್ರಜ್ಞಾನದ ಬಗ್ಗೆ ಮಗುವಿನಂತಹ ಕುತೂಹಲವನ್ನು ಹೊಂದಿದ್ದೇನೆ ಎಂದು ಅವರು ಹೇಳಿದರು, ಭಾರತದಲ್ಲಿ ಡಿಜಿಟಲ್ ಕ್ರಾಂತಿಯ ಬಗ್ಗೆ ಮಾತನಾಡುತ್ತಾ, ಪ್ರಧಾನ ಮಂತ್ರಿ ಅವರು ಅದರ ಮೇಲೆ ಯಾರೂ ಏಕಸ್ವಾಮ್ಯವನ್ನು ಹೊಂದಬಾರದು. ಅದನ್ನು ಸಾಮಾನ್ಯ ಜನರು ನಡೆಸಬೇಕು ಎಂದು ನಂಬುವವನು ನಾನು ಎಂದರು.

ಈ ಸಂದರ್ಭದಲ್ಲಿ, ಮಹಿಳೆಯರು ಕೃಷಿಯಲ್ಲಿ ಡ್ರೋನ್‌ಗಳನ್ನು ಬಳಸುವ “ಡ್ರೋನ್ ದೀದಿ” ಯೋಜನೆ ಮತ್ತು ರೋಗಿಗಳಿಗೆ ದೂರದ ಚಿಕಿತ್ಸೆ ನೀಡುವ ಉಪಕ್ರಮವನ್ನು ಅವರು ಎತ್ತಿ ತೋರಿಸಿದರು. ಶಿಕ್ಷಣದಲ್ಲಿ ಶಿಕ್ಷಕರ ನ್ಯೂನತೆಗಳನ್ನು ನೀಗಿಸಲು ತಂತ್ರಜ್ಞಾನವನ್ನು ಬಳಸಲಾಗುತ್ತಿದೆ ಎಂದು ಮೋದಿ ಹೇಳಿದರು.

ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ಡಿಜಿಟಲ್ ತಂತ್ರಜ್ಞಾನವು ದೊಡ್ಡ ಪಾತ್ರವನ್ನು ವಹಿಸುತ್ತದೆ. ಭಾರತವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಜನರಿಗೆ ಕೋವಿಡ್ ವ್ಯಾಕ್ಸಿನೇಷನ್ ಸ್ಲಾಟ್‌ಗಳು ಮತ್ತು ಪ್ರಮಾಣಪತ್ರಗಳನ್ನು ಒದಗಿಸಲು ಭಾರತವು ಕೋವಿನ್ ಪ್ಲಾಟ್‌ಫಾರ್ಮ್ ನ್ನು ಹೇಗೆ ಬಳಸಿತು ಎಂಬುದನ್ನು ಮೋದಿ ಈ ಸಂದರ್ಭದಲ್ಲಿ ಉಲ್ಲೇಖಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT