ದೆಹಲಿ ಸಚಿವ ಕೈಲಾಶ್ ಗಹ್ಲೋಟ್
ದೆಹಲಿ ಸಚಿವ ಕೈಲಾಶ್ ಗಹ್ಲೋಟ್ 
ದೇಶ

ಅಬಕಾರಿ ನೀತಿ ಹಗರಣ ಪ್ರಕರಣ: ದೆಹಲಿ ಸಚಿವ ಕೈಲಾಶ್ ಗಹ್ಲೋಟ್‌ಗೆ ಇ.ಡಿ ಸಮನ್ಸ್

Ramyashree GN

ನವದೆಹಲಿ: ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನಜಾಫ್‌ಗಢದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರಾಗಿರುವ ಗಹ್ಲೋಟ್ (49) ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದಲ್ಲಿ ಸಾರಿಗೆ, ಗೃಹ ಮತ್ತು ಕಾನೂನು ಸಚಿವರಾಗಿದ್ದಾರೆ.

ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮತ್ತು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು ಎಂದು ಇ.ಡಿ ಗಹ್ಲೋಟ್‌ಗೆ ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ನಂತರ ಅಬಕಾರಿ ನೀತಿಯನ್ನು ರದ್ದುಗೊಳಿಸಲಾಯಿತು.

ಈ ಪ್ರಕರಣದಲ್ಲಿ ಇ.ಡಿ ದೆಹಲಿ ಮುಖ್ಯಮಂತ್ರಿ ಅಱವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದಿದ್ದು, ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಈ ಹಿಂದೆಯೇ ಇಡಿ ಬಂಧಿಸಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

SCROLL FOR NEXT