ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

ಅಡ್ವಾಣಿ ಸೇರಿ ಐವರಿಗೆ ಪ್ರತಿಷ್ಠಿತ 'ಭಾರತ ರತ್ನ'; ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ

ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ 'ಭಾರತ ರತ್ನ'ವನ್ನು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ 'ಭಾರತ ರತ್ನ'ವನ್ನು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.

ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ ಡಾ.ಎಂ.ಎಸ್. ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರದಾನ ಮಾಡಲಾಯಿತು.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಚರಣ್ ಸಿಂಗ್ ಪರವಾಗಿ ಅವರ ಮೊಮ್ಮಗ ಆರ್ ಎಲ್ ಡಿ ಮುಖ್ಯಸ್ಥ ಜಯಂತ್ ಸಿಂಗ್ ಪ್ರಶಸ್ತಿ ಸ್ವೀಕರಿಸಿದರೆ, ಪಿ. ವಿ. ನರಸಿಂಹ ರಾವ್ ಪರವಾಗಿ ಅವರ ಪತ್ರ ಪಿ.ವಿ. ಪ್ರಭಾಕರ ರಾವ್ ಪ್ರಶಸ್ತಿ ಸ್ವೀಕರಿಸಿದರು.

ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಪರವಾಗಿ ಅವರ ಪುತ್ರ ರಾಮನಾಥ ಠಾಕೂರ್, ಕೃಷಿ ವಿಜ್ಞಾನಿ ಡಾ.ಎಂ. ಎಸ್. ಸ್ವಾಮಿನಾಥನ್ ಪರ ಅವರ ಪುತ್ರಿ ನಿತ್ಯಾರಾವ್ ಪ್ರಶಸ್ತಿ ಸ್ವೀಕರಿಸಿದರು.

ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಿ ಮೋದಿ ಪೋಸ್

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel