ಎಲ್‌ಕೆ ಅಡ್ವಾನಿಗೆ ಭಾರತ ರತ್ನ ಪ್ರಧಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

ಎಲ್‌ಕೆ ಅಡ್ವಾಣಿ ನಿವಾಸದಲ್ಲಿಯೇ 'ಭಾರತ ರತ್ನ' ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ದಿಗ್ಗಜ ಮತ್ತು ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಅವರ ನಿವಾಸದಲ್ಲಿಯೇ ಪ್ರದಾನ ಮಾಡಿದರು.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ದಿಗ್ಗಜ ಮತ್ತು ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಅವರ ನಿವಾಸದಲ್ಲಿಯೇ ಪ್ರದಾನ ಮಾಡಿದರು.

ನಿನ್ನೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು ಎಂದು ರಾಷ್ಟ್ರಪತಿ ಭವನವು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ರಾಷ್ಟ್ರಪತಿ ಮುರ್ಮು ಅವರು ಅಡ್ವಾಣಿಯವರಿಗೆ ಅವರ ನಿವಾಸದಲ್ಲಿಯೇ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.

ಭಾರತೀಯ ರಾಜಕೀಯದ ದೊರೆಯಾಗಿರುವ ಅಡ್ವಾಣಿ ಅವರು ಏಳು ದಶಕಗಳಿಗೂ ಹೆಚ್ಚು ಕಾಲ ಅಚಲವಾದ ಸಮರ್ಪಣೆ ಮತ್ತು ವಿಭಿನ್ನತೆಯಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

1927ರಲ್ಲಿ ಕರಾಚಿಯಲ್ಲಿ ಜನಿಸಿದ ಅಡ್ವಾಣಿ ಅವರು 1947ರಲ್ಲಿ ವಿಭಜನೆಯ ಹಿನ್ನೆಲೆಯಲ್ಲಿ ಭಾರತಕ್ಕೆ ವಲಸೆ ಬಂದರು. ಅವರ ಸಾಂಸ್ಕೃತಿಕ ರಾಷ್ಟ್ರೀಯತೆಯ ದೃಷ್ಟಿಕೋನದಿಂದ, ಅವರು ದಶಕಗಳ ಕಾಲ ದೇಶದ ಉದ್ದಗಲಕ್ಕೂ ಶ್ರಮಿಸಿದರು ಮತ್ತು ಸಾಮಾಜಿಕ-ರಾಜಕೀಯ ಭೂದೃಶ್ಯದಲ್ಲಿ ಪರಿವರ್ತನೆ ತಂದರು ಎಂದು ರಾಷ್ಟ್ರಪತಿ ಭವನ ಹೇಳಿದೆ.

'ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಭಾರತದ ಪ್ರಜಾಪ್ರಭುತ್ವವ ಅಪಾಯಕ್ಕೆ ಸಿಲುಕಿದಾಗ, ಅವರು ಅದನ್ನು ಸರ್ವಾಧಿಕಾರಿ ಧೋರಣೆಗಳಿಂದ ರಕ್ಷಿಸಲು ದಣಿವರಿಯದೆ ಹೋರಾಡಿದರು' ಎಂದು ಅದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ ಮತ್ತು ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದೆ.

96 ವರ್ಷದ ಅಡ್ವಾಣಿ ಅವರು 2002ರ ಜೂನ್‌ನಿಂದ 2004ರ ಮೇವರೆಗೆ ಉಪ ಪ್ರಧಾನಿಯಾಗಿ ಮತ್ತು 1999 ರ ಅಕ್ಟೋಬರ್‌ನಿಂದ 2004ರ ಮೇವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005 ರವರೆಗೆ ಹಲವಾರು ಬಾರಿ ಬಿಜೆಪಿ ಅಧ್ಯಕ್ಷರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT