ಹಿಂದೂಗಳಿಂದ ಪೂಜೆ
ಹಿಂದೂಗಳಿಂದ ಪೂಜೆ TNIE
ದೇಶ

ಜ್ಞಾನವಾಪಿಯಲ್ಲಿ ಹಿಂದೂ ಪೂಜೆ: ನಾಳೆ ಮುಸ್ಲಿಂ ಕಡೆಯ ಅರ್ಜಿಯ ವಿಚಾರಣೆ; ಎಲ್ಲರ ಚಿತ್ತ 'ಸುಪ್ರೀಂ' ನತ್ತ!

Vishwanath S

ನವದೆಹಲಿ: ಏಪ್ರಿಲ್ 1ರಂದು ಸುಪ್ರೀಂ ಕೋರ್ಟ್‌ನಲ್ಲಿ ಜ್ಞಾನವಾಪಿ ಪ್ರಕರಣದ ವಿಚಾರಣೆ ನಡೆಯಲಿದೆ. ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂ ಪ್ರಾರ್ಥನೆಗೆ ಅವಕಾಶ ನೀಡುವ ಕೆಲ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯು ಅರ್ಜಿ ಸಲ್ಲಿಸಿದೆ.

ಫೆಬ್ರುವರಿ 26ರ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ವಿಚಾರಣೆ ನಡೆಸಲಿದೆ.

ವಾರಣಾಸಿ ಜಿಲ್ಲಾ ನ್ಯಾಯಾಲಯವು ಹಿಂದೂಗಳ ಪರವಾಗಿ ತೀರ್ಪು ನೀಡಿತ್ತು

ಮುಸ್ಲಿಂ ಕಡೆಯ ಅರ್ಜಿಯನ್ನು ತಿರಸ್ಕರಿಸಿದ್ದ ಅಲಹಾಬಾದ್ ಹೈಕೋರ್ಟ್ ವ್ಯಾಸ್ ನೆಲಮಾಳಿಗೆಯಲ್ಲಿ ಹಿಂದೂ ಕಡೆಯ ಪೂಜೆಯನ್ನು ಮುಂದುವರಿಸಲು ಆದೇಶಿಸಿತ್ತು. ವಾರಣಾಸಿ ಜಿಲ್ಲಾ ನ್ಯಾಯಾಲಯವೂ ಈ ಪ್ರಕರಣದಲ್ಲಿ ಹಿಂದೂಗಳ ಪರವಾಗಿ ತೀರ್ಪು ನೀಡಿದ್ದು, ಇದರ ವಿರುದ್ಧ ಮುಸ್ಲಿಂ ಕಡೆಯವರು ಅಲಹಾಬಾದ್ ಹೈಕೋರ್ಟ್‌ನ ಮೊರೆ ಹೋಗಿದ್ದರು.

ಆರಾಧನಾ ಸ್ಥಳಗಳ ಕಾಯ್ದೆ-1991ರಲ್ಲಿ ಅಲಹಾಬಾದ್ ಹೈಕೋರ್ಟ್ ಹಸ್ತಕ್ಷೇಪ ಸರಿಯಲ್ಲ ಎಂದು ಮುಸ್ಲಿಂ ಕಡೆಯವರು ವಾದಿಸುತ್ತಿದ್ದಾರೆ. 1991ರಲ್ಲಿ ವಾರಣಾಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. 1991ರಲ್ಲಿ ಅರ್ಜಿದಾರ ಸ್ಥಳೀಯ ಅರ್ಚಕರು ವಾರಣಾಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರು. ಈ ಅರ್ಜಿಯಲ್ಲಿ ಅರ್ಜಿದಾರರು ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ಅನುಮತಿ ಕೋರಿದ್ದರು. 16ನೇ ಶತಮಾನದಲ್ಲಿ ಔರಂಗಜೇಬನ ಆದೇಶದ ಮೇರೆಗೆ ಕಾಶಿ ವಿಶ್ವನಾಥ ದೇವಾಲಯದ ಒಂದು ಭಾಗವನ್ನು ಕೆಡವಿ ಅಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಈ ಅರ್ಜಿಯಲ್ಲಿ ಹೇಳಲಾಗಿದೆ.

SCROLL FOR NEXT