ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡಿನ ಕಲ್ಲು ಕ್ವಾರಿಯಲ್ಲಿ ಭಾರೀ ಸ್ಫೋಟ, ಮೂವರ ಸಾವು, ಹಲವರಿಗೆ ಗಾಯ

ತಮಿಳುನಾಡಿನ ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ಬುಧವಾರ ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ.

ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ಬುಧವಾರ ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ.

ಇದುವರೆಗೆ ಮೂವರ ಶವ ಪತ್ತೆಯಾಗಿದ್ದು ಭಾರೀ ಸ್ಫೋಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಶೇಖರಣಾ ಕೊಠಡಿಯಲ್ಲಿ ಸ್ಫೋಟಕಗಳಿದ್ದು ಅಲ್ಲೇ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ರಕ್ಷಣಾ ತಂಡಗಳು ಅವಶೇಷಗಳನ್ನು ಎಚ್ಚರಿಕೆಯಿಂದ ತೆರವುಗೊಳಿಸುತ್ತಿವೆ ಮತ್ತು ಸ್ಫೋಟಗೊಳ್ಳದ ವಸ್ತುಗಳನ್ನು ಹುಡುಕುತ್ತಿವೆ.

ಸುರಕ್ಷತಾ ಅಪಾಯಗಳು ಮತ್ತು ಓವರ್‌ಲೋಡ್ ಟ್ರಕ್‌ಗಳನ್ನು ಒಳಗೊಂಡ ಅನೇಕ ವಿಚಾರಗಳ ಬಗ್ಗೆ ಹಲವು ದಿನಗಳಿಂದ ದೂರು ಬರುತ್ತಿತ್ತು. ಸ್ಫೋಟದ ಮೊದಲು ಕ್ವಾರಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ವರದಿಯಾಗಿದೆ. ಸೇತು ಒಡೆತನದ ಕ್ವಾರಿಯು ಮಾನ್ಯ ಪರವಾನಗಿಯನ್ನು ಹೊಂದಿದೆ ಎಂದು ಹೇಳಲಾಗಿದೆ. ಅಪಘಾತದ ನಂತರ, ಸ್ಥಳೀಯ ನಿವಾಸಿಗಳು ಕ್ವಾರಿಯನ್ನು ಶಾಶ್ವತವಾಗಿ ಮುಚ್ಚುವಂತೆ ಧರಣಿ ನಡೆಸಿದರು. ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ವಿವರಗಳು ಇನ್ನೂ ಪತ್ತೆಯಾಗಿಲ್ಲ. ಅಪಘಾತದಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ನಂಬಲಾಗಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಪಡೆ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!