ಬ್ರಿಜ್ ಭೂಷಣ್ ಶರಣ್ ಸಿಂಗ್ PTI
ದೇಶ

ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ; ಕೇಸರ್‌ಗಂಜ್‌ ಕ್ಷೇತ್ರದಿಂದ ಅವರ ಪುತ್ರ ಕಣಕ್ಕೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಲಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಿಸಿದೆ.

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಲಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಿಸಿದ್ದು, ಉತ್ತರ ಪ್ರದೇಶದ ಕೇಸರ್‌ಗಂಜ್‌ ಕ್ಷೇತ್ರದಿಂದ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ ಎಂದು ಮೂಲಗಳು ತಿಳಿಸಿವೆ.

ಐದನೇ ಹಂತದಲ್ಲಿ ಮೇ 20 ರಂದು ಕೇಸರ್‌ಗಂಜ್‌ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಮೇ 3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಟಿಕೆಟ್ ನಿರಾಕರಿಸಲಾಗುತ್ತಿದೆ. ಆದರೆ ಕೇಸರ್‌ಗಂಜ್‌ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿರುವ ಠಾಕೂರ್ ನಾಯಕನ ಕುಟುಂಬದಲ್ಲಿ ಒಬ್ಬರಿಗೆ ಕೇಸರಿ ಪಕ್ಷ ಟಿಕೆಟ್ ನೀಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಬ್ರಿಜ್ ಭೂಷಣ್ ಶರಣ್ ಅವರ ಕಿರಿಯ ಪುತ್ರ ಹಾಗೂ ಉತ್ತರ ಪ್ರದೇಶ ಕುಸ್ತಿ ಫೆಡರೇಷನ್​ನ ಅಧ್ಯಕ್ಷ ಕರಣ್ ಭೂಷಣ್ ಶರಣ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸತತ ಐದು ಬಾರಿ ಗೆದ್ದಿರುವ ಗಾಂಧಿ ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿಯಿಂದ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಬಿಜೆಪಿ ತನ್ನ ಅಭ್ಯರ್ಥಿ ಎಂದು ಘೋಷಿಸಿದೆ. ಕಾಂಗ್ರೆಸ್ ಇನ್ನೂ ಈ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!