ಥಾಣೆ: ಮಾಜಿ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಅವರು ಶುಕ್ರವಾರ ತಮ್ಮ ಕುಟುಂಬದೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದರು.
ಸುಮಾರು ಎರಡು ದಶಕಗಳ ಹಿಂದೆ ಅವಿಭಜಿತ ಶಿವಸೇನೆ ತೊರೆದು ಕಾಂಗ್ರೆಸ್ ಸೇರಿದ್ದ ಮುಂಬೈ ಮಾಜಿ ಸಂಸದ ಸಂಜಯ್ ನಿರುಪಮ್ ಅವರು ಇಂದು ಮತ್ತೆ ಶಿವಸೇನೆ ಸೇರ್ಪಡೆಯಾದರು.
ಕಳೆದ ತಿಂಗಳು ಸಂಜಯ್ ನಿರುಪಮ್ ಅವರನ್ನು "ಅಶಿಸ್ತು ಮತ್ತು ಪಕ್ಷ ವಿರೋಧಿ ಚಟುವಟಿಕೆ" ಆರೋಪದ ಮೇಲೆ ಆರು ವರ್ಷಗಳ ಕಾಲ ಕಾಂಗ್ರೆಸ್ ನಿಂದ ಉಚ್ಚಾಟಿಸಲಾಗಿತ್ತು.
ಸಂಜಯ್ ನಿರುಪಮ್ ಅವರು 2005 ರಲ್ಲಿ ಕಾಂಗ್ರೆಸ್ ಸೇರಿದ್ದರು ಮತ್ತು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಅವರು 2009 ರ ಚುನಾವಣೆಯಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಿರಿಯ ನಾಯಕ ರಾಮ್ ನಾಯಕ್ ಅವರ ವಿರುದ್ಧ ಗೆಲುವು ಸಾಧಿಸಿದ್ದರು.