ಬಿಜೆಪಿ ಸೇರಿದ ಅರವಿಂದರ್ ಸಿಂಗ್ ಲವ್ಲಿ 
ದೇಶ

ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ, ಇತರ ನಾಯಕರು ಬಿಜೆಪಿ ಸೇರ್ಪಡೆ

ದೆಹಲಿ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಹಾಗೂ ಮಾಜಿ ನಗರಾಡಳಿತ ಸಚಿವ ರಾಜ್ ಕುಮಾರ್ ಚೌಹಾಣ್ ಸೇರಿದಂತೆ ಹಲವು ನಾಯಕರೊಂದಿಗೆ ಶನಿವಾರ ಬಿಜೆಪಿ ಸೇರ್ಪಡೆಯಾದರು.

ನವದೆಹಲಿ: ದೆಹಲಿ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ, ಮಾಜಿ ನಗರಾಡಳಿತ ಸಚಿವ ರಾಜ್ ಕುಮಾರ್ ಚೌಹಾಣ್ ಮತ್ತು ಮಾಜಿ ಶಾಸಕರಾದ ನೀರಜ್ ಬಸೋಯಾ ಹಾಗೂ ನಸೀಬ್ ಸಿಂಗ್ ಸೇರಿದಂತೆ ಹಲವು ನಾಯಕರೊಂದಿಗೆ ಶನಿವಾರ ಬಿಜೆಪಿ ಸೇರ್ಪಡೆಯಾದರು.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ ಎಲ್ಲಾ ಮಾಜಿ ಕಾಂಗ್ರೆಸ್ ನಾಯಕರು, ಲೋಕಸಭೆ ಚುನಾವಣೆಯಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಜೊತೆಗಿನ ಮೈತ್ರಿಯನ್ನು ಟೀಕಿಸಿದರು.

ತಮಗೆ ಬಿಜೆಪಿ ಸೇರಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರನ್ನು ಶ್ಲಾಘಿಸಿದ ಲವ್ಲಿ, ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಮೋದಿ ಹೆಚ್ಚಿನ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಹೇಳಿದರು.

ಲವ್ಲಿ ಇತ್ತೀಚೆಗೆ ಎಎಪಿ ಜೊತೆಗಿನ ಮೈತ್ರಿಯನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಲೋಕಸಭೆ ಚುನಾವಣೆಗೆ ರಾಷ್ಟ್ರ ರಾಜಧಾನಿಯಲ್ಲಿ ಕನ್ಹಯ್ಯಾ ಕುಮಾರ್ ಮತ್ತು ಉದಿತ್ ರಾಜ್ ಸೇರಿದಂತೆ ಇತರ ಕೆಲ ಅಭ್ಯರ್ಥಿಗಳ ಆಯ್ಕೆಯಿಂದ ಲವ್ವಿ ಮತ್ತು ಇತರ ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ನಂಬಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT