ಬೆಂಗಾವಲು ಪಡೆ ಮೇಲೆ ಉಗ್ರರ ದಾಳಿ 
ದೇಶ

ಕಾಶ್ಮೀರ: ಪೂಚ್‌ನಲ್ಲಿ ಐಎಎಫ್ ಬೆಂಗಾವಲು ಪಡೆ ಮೇಲೆ ಉಗ್ರರ ದಾಳಿ; ಓರ್ವ ಸೈನಿಕ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಶನಿವಾರ ಭಾರತೀಯ ವಾಯುಪಡೆ(ಐಎಎಫ್‌)ಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಐಎಎಫ್‌ ಯೋಧ ಹುತಾತ್ಮರಾಗಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಶನಿವಾರ ಭಾರತೀಯ ವಾಯುಪಡೆ(ಐಎಎಫ್‌)ಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಐಎಎಫ್‌ ಯೋಧ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದಲ್ಲಿ ಮೇ 25 ರಂದು ಆರನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಕೆಲವೇ ವಾರಗಳ ಮುನ್ನ ಈ ಕ್ಷೇತ್ರ ವ್ಯಾಪ್ತಿಯ ಪೂಂಚ್‌ನಲ್ಲಿ ಇಂದು ಉಗ್ರ ದಾಳಿ ನಡೆದಿದೆ.

ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಐವರು IAF ಸಿಬ್ಬಂದಿಗೆ ಗಾಯಗೊಂಡಿದ್ದು, ತಕ್ಷಣ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಒಬ್ಬ ಏರ್ ವಾರಿಯರ್ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ ಎಂದು ಐಎಎಫ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಇಂದು ಸಂಜೆ ಪೂಂಚ್‌ನ ಸುರನ್‌ಕೋಟ್ ಪ್ರದೇಶದ ಸನೈ ಟಾಪ್ ಕಡೆಗೆ ಚಲಿಸುತ್ತಿದ್ದ ಐಎಎಫ್ ವಾಹನಗಳ ಮೇಲೆ ನಾಲ್ವರು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು. ದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಇದಕ್ಕು ಮುನ್ನ ಅಧಿಕಾರಿಗಳು ತಿಳಿಸಿದ್ದರು.

ನಂತರ ತೀವ್ರವಾಗಿ ಗಾಯಗೊಂಡ ಸೈನಿಕರಲ್ಲಿ ಒಬ್ಬರು ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಹುತಾತ್ಮರಾದರು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT