ಅಮಿತ್ ಶಾ - ರಾಹುಲ್ ಗಾಂಧಿ 
ದೇಶ

ಸೋನಿಯಾ ಗಾಂಧಿ ಹಲವು ಬಾರಿ ರಾಹುಲ್ ನನ್ನು ಲಾಂಚ್ ಮಾಡಲು ಯತ್ನಿಸಿ ವಿಫಲವಾಗಿದ್ದಾರೆ: ಅಮಿತ್ ಶಾ

ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿಯನ್ನು ಲಾಂಚ್ ಮಾಡಲು ಹಲವಾರು ಬಾರಿ ಪ್ರಯತ್ನಿಸಿದ್ದಾರೆ. ಆದರೆ ಅವರ ಎಲ್ಲಾ ಪ್ರಯತ್ನಗಳ ವಿಫಲವಾಗಿವೆ.

ಅಹಮದಾಬಾದ್: "ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿಯನ್ನು ಲಾಂಚ್ ಮಾಡಲು ಹಲವಾರು ಬಾರಿ ಪ್ರಯತ್ನಿಸಿದ್ದಾರೆ. ಆದರೆ ಅವರ ಎಲ್ಲಾ ಪ್ರಯತ್ನಗಳ ವಿಫಲವಾಗಿವೆ. ನೀವು ಅಂತಹ ವ್ಯಕ್ತಿಗೆ ಏಕೆ ಮತ ಹಾಕಬೇಕು?" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ವಲ್ಸಾದ್ ಲೋಕಸಭಾ ಕ್ಷೇತ್ರದ ವನ್ಸಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅರಣ್ಯ(ಬುಡಕಟ್ಟು) ಪ್ರದೇಶಗಳಲ್ಲಿ ನಕ್ಸಲೀಯ ಚಟುವಟಿಕೆಗಳು ಹೆಚ್ಚಾಗಲಿದ್ದು, ಶಾಂತಿಯುತ ವಾತಾವರಣ ಮತ್ತು ಬುಡಕಟ್ಟು ಜನಾಂಗದ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಧವಲ್ ಪಟೇಲ್‌ಗೆ ಮತ ನೀಡಿ ಎಂದು ಮನವಿ ಮಾಡಿದರು.

ಬಿಜೆಪಿ ಆಡಳಿತದ ಅವಧಿಯಲ್ಲಿ ಬುಡಕಟ್ಟು ಜನಾಂಗದ ಅಭಿವೃದ್ಧಿ ಕುರಿತು ಮಾತನಾಡಿದ ಶಾ, "ಬುಡಕಟ್ಟು ಪ್ರದೇಶಗಳನ್ನು ಅಭಿವೃದ್ಧಿ ಮಾಡಲು ಮತ್ತು ನಕ್ಸಲಿಸಂ ತೊಡೆದುಹಾಕಲು, ದೂರದ ಹಳ್ಳಿಯ ಪ್ರತಿ ಮನೆ ಬಾಗಿಲಿಗೆ ನೀರು ಸರಬರಾಜು ಮಾಡುವ ಪಕ್ಷದ ಅಭ್ಯರ್ಥಿಗೆ ನೀವು ಮತ ಹಾಕಬೇಕು ಎಂದರು.

ಎಎಪಿಯನ್ನು "ನಗರ ನಕ್ಸಲ್ ಪಕ್ಷ" ಎಂದು ಟೀಕಿಸಿದ ಅಮಿತ್ ಶಾ, ಕಾಂಗ್ರೆಸ್ ಮತ್ತು ಎಎಪಿ ಮೈತ್ರಿಯನ್ನು ಖಂಡಿಸಿದರು ಮತ್ತು ರಾಹುಲ್ ಗಾಂಧಿಯವರು ಕೋವಿಡ್ ಲಸಿಕೆ ಬಗ್ಗೆ ಬುಡಕಟ್ಟು ಸಮುದಾಯಗಳನ್ನು ತಪ್ಪುದಾರಿಗೆಳೆದಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!