ಸಾಂದರ್ಭಿಕ ಚಿತ್ರ 
ದೇಶ

ಮಧ್ಯಪ್ರದೇಶ: ಮರಳು ಮಾಫಿಯಾ, ಟ್ರ್ಯಾಕ್ಟರ್‌ ಹರಿಸಿ ಎಎಸ್‌ಐ ಹತ್ಯೆ!

ಮರಳು ಮಾಫಿಯಾ ದಂಧೆಯಲ್ಲಿ ತೊಡಗಿರುವವರು ಟ್ರಾಕ್ಟರ್ ಹರಿಸಿ ಎಎಸ್ ಐ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್‌ ಬಳಿ ಶನಿವಾರ ರಾತ್ರಿ ನಡೆದಿದೆ.

ಮಧ್ಯಪ್ರದೇಶ: ಮರಳು ಮಾಫಿಯಾ ದಂಧೆಯಲ್ಲಿ ತೊಡಗಿರುವವರು ಟ್ರಾಕ್ಟರ್ ಹರಿಸಿ ಎಎಸ್ ಐ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್‌ ಬಳಿ ಶನಿವಾರ ರಾತ್ರಿ ನಡೆದಿದೆ.

ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಪೊಲೀಸ್ ತಂಡ ಗ್ರಾಮಕ್ಕೆ ಆಗಮಿಸಿದ ನಂತರ ಟ್ರಾಕ್ಟರ್ ಹರಿಸಿ ಎಎಸ್‌ಐ ಹತ್ಯೆ ಮಾಡಲಾಗಿದೆ.

ಶಹದೋಲ್‌ನ ನೌಧಿಯಾದಲ್ಲಿ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್‌ಐ ಮಹೇಂದ್ರ ಬಗ್ರಿ ಮತ್ತು ಅವರ ತಂಡವು ವಾರಂಟ್‌ನೊಂದಿಗೆ ಆರೋಪಿಯನ್ನು ಬಂಧಿಸಲು ಹೋಗಿದ್ದಾಗ ಎಎಸ್ ಐ ಹತ್ಯೆ ಮಾಡಲಾಗಿದೆ. ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಾಗರ್ ತಿಳಿಸಿದ್ದಾರೆ.

ವಿಚಾರಣೆ ವೇಳೆ ಟ್ರ್ಯಾಕ್ಟರ್ ಮಾಲೀಕನ ಮಗನೂ ಇದರಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ..ಐಪಿಸಿ ಸೆಕ್ಷನ್ 302/34, 414, 379 ಹಾಗೂ ಗಣಿಗಾರಿಕೆಗೆ ಸಂಬಂಧಿಸಿದ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT