ನಿರ್ಮಲಾ ಸಪ್ರೆ  
ದೇಶ

ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕಿ ನಿರ್ಮಲಾ ಸಪ್ರೆ ಬಿಜೆಪಿ ಸೇರ್ಪಡೆ

ಮಧ್ಯ ಪ್ರದೇಶದ ಬಿನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಿರ್ಮಲಾ ಸಪ್ರೆ ಅವರು ಭಾನುವಾರ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಸಾಗರ್: ಮಧ್ಯಪ್ರದೇಶದ ಬಿನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಿರ್ಮಲಾ ಸಪ್ರೆ ಅವರು ಭಾನುವಾರ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನಿರ್ಮಲಾ ಸಪ್ರೆ ಅವರು ಮಾರ್ಚ್‌ನಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಮೂರನೇ ಶಾಸಕಿಯಾಗಿದ್ದಾರೆ.

ಸಪ್ರೆ ಅವರು ಸಾಗರ್ ಜಿಲ್ಲೆಯ ರಹತ್‌ಗಢದಲ್ಲಿ ಇಂದು ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಪ್ರೆ, ತಮ್ಮ ಕ್ಷೇತ್ರದ ಜನತೆಗೆ ಹಲವಾರು ಭರವಸೆಗಳನ್ನು ನೀಡಿದ್ದರೂ ಈಡೇರಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಪ್ರಸ್ತುತ ಅಧಿಕಾರದಿಂದ ಹೊರಗಿದೆ. ವಿರೋಧ ಪಕ್ಷವು ಅಭಿವೃದ್ಧಿಯ ಯಾವುದೇ ಅಜೆಂಡಾವನ್ನು ಹೊಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಅವರ ನೇತೃತ್ವದಲ್ಲಿ ನಾನು ಅಭಿವೃದ್ಧಿಯ ಹೊಳೆಗೆ ಸೇರಿಕೊಂಡಿದ್ದೇನೆ ಎಂದು ಸಪ್ರೆ ಹೇಳಿದ್ದಾರೆ.

ಚುನಾವಣಾ ಆಯೋಗವು ಮಾರ್ಚ್ 16 ರಂದು ಲೋಕಸಭೆ ಚುನಾವಣೆ ದಿನಾಂಕ ಘೋಷಿಸಿದ ನಂತರ ಮಾರ್ಚ್ 29 ರಂದು, ಛಿಂದ್ವಾರಾ ಜಿಲ್ಲೆಯ ಅಮರವಾರದ ಶಾಸಕ ಕಮಲೇಶ್ ಶಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.

ಏಪ್ರಿಲ್ 30 ರಂದು ಕಾಂಗ್ರೆಸ್ ಶಾಸಕ ರಾಮ್ ನಿವಾಸ್ ರಾವತ್ ಅವರು ಅತ್ಯಂತ ಹಳೆಯ ಪಕ್ಷವನ್ನು ತೊರೆದು ಬಿಜೆಪಿ ಸೇರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT