ಬಿಆರ್‌ಎಸ್ ನಾಯಕಿ ಕೆ ಕವಿತಾ 
ದೇಶ

ದೆಹಲಿ ಅಬಕಾರಿ ನೀತಿ ಹರಗಣ: ಬಿಆರ್‌ಎಸ್ ನಾಯಕಿ ಕೆ ಕವಿತಾಗೆ ಜಾಮೀನು ನಿರಾಕರಣೆ

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇ.ಡಿ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

ನವದೆಹಲಿ: ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇ.ಡಿ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಅರ್ಜಿಗಳನ್ನು ವಜಾಗೊಳಿಸಿದ್ದು, ತನಿಖೆ ಪ್ರಗತಿಯಲ್ಲಿರುವ ಈ ಹಂತದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಇ.ಡಿ ಮತ್ತು ಸಿಬಿಐ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ಕವಿತಾ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!