ಚಿಕನ್ ಶವರ್ಮ online desk
ದೇಶ

ಚಿಕನ್ ಶವರ್ಮ ಸೇವಿಸಿ 19 ವರ್ಷದ ಯುವಕ ಸಾವು; ಪದೇ ಪದೇ ಆಸ್ಪತ್ರೆಗೆ ಹೋದರೂ ಪ್ರಯೋಜನವಾಗಲಿಲ್ಲ!

ಚಿಕನ್ ಶವರ್ಮ ಸೇವನೆ ಮಾಡಿದ 19 ವರ್ಷದ ಯುವಕ ಸಾವನ್ನಪ್ಪಿದ್ದು, ಪ್ರಕರಣದ ಸಂಬಂಧ ಇಬ್ಬರು ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಚಿಕನ್ ಶವರ್ಮ ಸೇವನೆ ಮಾಡಿದ 19 ವರ್ಷದ ಯುವಕ ಸಾವನ್ನಪ್ಪಿದ್ದು, ಪ್ರಕರಣದ ಸಂಬಂಧ ಇಬ್ಬರು ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವಕ ಸ್ಟಾಲ್ ನಿಂದ ಚಿಕನ್ ಶರ್ವಮ ತಂದು ಸೇವನೆ ಮಾಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ.-3 ರಂದು ಟ್ರಾಂಬೆಯಲ್ಲಿ ಈ ಘಟನೆ ವರದಿಯಾಗಿದೆ.

ಪ್ರಥಮೇಶ್ ಭೋಕ್ಸೆ ಮೃತ ಯುವಕನಾಗಿದ್ದು, ಚಿಕನ್ ಶವರ್ಮ ಸೇವನೆ ಬಳಿಕ ಹೊಟ್ಟೆನೋವು, ವಾಂತಿಯಾಗಿದ್ದು, ವೈದ್ಯಕೀಯ ನೆರವಿಗಾಗಿ ಸರ್ಕಾರಿ ಆಸ್ಪತ್ರೆಗೆ ಹೋದರೂ ಪ್ರಯೋಜನವಾಗಲಿಲ್ಲ.

ಮನೆಗೆ ಹಿಂದಿರುಗಿದ ನಂತರ ಆತ ಮತ್ತೆ ಅನಾರೋಗ್ಯಕ್ಕೀಡಾದ. ಈ ಬಳಿಕ ಯುವಕನ ಕುಟುಂಬ ಸದಸ್ಯರು ಆತನನ್ನು ಮೇ 5 ರಂದು ಕೆಇಎಂ ಆಸ್ಪತ್ರೆಗೆ ಕರೆದೊಯ್ದರು. ವೈದ್ಯರು ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದ್ದರು ಎಂದು ಟ್ರಾಂಬೆ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಚಿಕಿತ್ಸೆ ನೀಡಿದರೂ ಮತ್ತೆ ಆತ ಅನಾರೋಗ್ಯಕ್ಕೀಡಗಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT