ವೈಜಯಂತಿಮಾಲಾಗೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು 
ದೇಶ

ಹಿರಿಯ ನಟಿ ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ!

ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ತೆಲುಗು ನಟ ಕೊನಿಡೆಲಾ ಚಿರಂಜೀವಿ, ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ದಿವಂಗತ ಎಂ ಫಾತಿಮಾ ಬೀವಿ ಮತ್ತಿತರ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.

ನವದೆಹಲಿ: ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ತೆಲುಗು ನಟ ಕೊನಿಡೆಲಾ ಚಿರಂಜೀವಿ, ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ದಿವಂಗತ ಎಂ ಫಾತಿಮಾ ಬೀವಿ ಮತ್ತಿತರ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬಾಂಬೆ ಸಮಾಚಾರ ಪತ್ರಿಕೆ ಮಾಲೀಕ ಹಾರ್ಮುಸ್ಜಿ ಎನ್ ಕಾಮಾ, ಬಿಜೆಪಿ ನಾಯಕ ಓ ರಾಜಗೋಪಾಲ್, ಲಡಾಖ್‌ನ ಆಧ್ಯಾತ್ಮಿಕ ನಾಯಕ ತೊಗ್ಡಾನ್ ರಿಂಪೋಚೆ, ತಮಿಳು ನಟ ದಿವಂಗತ "ಕ್ಯಾಪ್ಟನ್" ವಿಜಯಕಾಂತ್ , ಗುಜರಾತಿ ಪತ್ರಿಕೆ "ಜನ್ಮಭೂಮಿ" ಸಿಇಒ ಕುಂದನ್ ವ್ಯಾಸ್ ಅವರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

90 ವರ್ಷದ ವೈಜಯಂತಿ ಮಾಲಾ ಮತ್ತು ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿದರೆ, ಬೀವಿ, ಕಾಮ, ರಾಜಗೋಪಾಲ್, ವಿಜಯಕಾಂತ್, ರಿಂಪೋಚೆ ಮತ್ತು ವ್ಯಾಸ್ ಅವರಿಗೆ ಪದ್ಮಭೂಷಣ ನೀಡಲಾಯಿತು. ಬೀವಿ, ವಿಜಯಕಾಂತ್ ಮತ್ತು ರಿಂಪೋಚೆ ಅವರ ಕುಟುಂಬದ ಸದಸ್ಯರು ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ.

ಪ್ರತಿ ವರ್ಷ ಗಣರಾಜ್ಯೋತ್ಸವದ ಮುನ್ನಾದಿನದಂದು ಪ್ರಶಸ್ತಿಗಳನ್ನು ಪ್ರಕಟಿಸಲಾಗುತ್ತದೆ. 2024 ರಲ್ಲಿ ಐದು ಪದ್ಮ ವಿಭೂಷ, 17 ಪದ್ಮ ಭೂಷಣ ಮತ್ತು 110 ಪದ್ಮ ಪ್ರಶಸ್ತಿ ಸೇರಿದಂತೆ ಒಟ್ಟಾರೇ 132 ಪ್ರಶಸ್ತಿಗಳನ್ನು ರಾಷ್ಟ್ರಪತಿ ಘೋಷಿಸಿದ್ದರು.

ಪ್ರಶಸ್ತಿ ಪುರಸ್ಕೃತರಲ್ಲಿ ಅರ್ಧಕ್ಕಿಂತ ಹೆಚ್ಚು ಜನರಿಗೆ ಏಪ್ರಿಲ್ 22 ರಂದು ನೀಡಲಾಗಿತ್ತು. ಉಳಿದವರಿಗೆ ಗುರುವಾರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT