ಕೇಜ್ರಿವಾಲ್ ಸಾಂದರ್ಭಿಕ ಚಿತ್ರ 
ದೇಶ

ಚುನಾವಣಾ ಪ್ರಚಾರ ಮೂಲಭೂತ, ಸಾಂವಿಧಾನಿಕ ಹಕ್ಕಲ್ಲ: ಕೇಜ್ರಿವಾಲ್ ಮಧ್ಯಂತರ ಜಾಮೀನಿಗೆ ಇಡಿ ವಿರೋಧ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡುವುದನ್ನು ಗುರುವಾರ ಸುಪ್ರೀಂಕೋರ್ಟ್ ನಲ್ಲಿ ವಿರೋಧಿಸಿದ ಇಡಿ ಚುನಾವಣಾ ಪ್ರಚಾರ ಮೂಲಭೂತ, ಸಾಂವಿಧಾನಿಕ ಅಥವಾ ಕಾನೂನುಬದ್ಧ ಹಕ್ಕಲ್ಲ ಎಂದು ಹೇಳಿದೆ.

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡುವುದನ್ನು ಗುರುವಾರ ಸುಪ್ರೀಂಕೋರ್ಟ್ ನಲ್ಲಿ ವಿರೋಧಿಸಿದ ಇಡಿ ಚುನಾವಣಾ ಪ್ರಚಾರ ಮೂಲಭೂತ, ಸಾಂವಿಧಾನಿಕ ಅಥವಾ ಕಾನೂನುಬದ್ಧ ಹಕ್ಕಲ್ಲ ಎಂದು ಹೇಳಿದೆ.

ಯಾವುದೇ ರಾಜಕೀಯ ನಾಯಕರಿಗೆ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ನೀಡಿಲ್ಲ. ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದರೆ ತಪ್ಪು ನಡವಳಿಕೆಗೆ ಕಾರಣವಾಗುತ್ತದೆ ಎಂದು ತನಿಖಾ ಸಂಸ್ಥೆ ಹೇಳಿದೆ.

ಬುಧವಾರ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಮಧ್ಯಂತರ ಜಾಮೀನಿಗೆ ಸಂಬಂಧಿಸಿದ ಆದೇಶವನ್ನು ಶುಕ್ರವಾರ ನೀಡಲಿದ್ದೇವೆ. ಬಂಧನವನ್ನು ಪ್ರಶ್ನಿಸಿರುವ ಪ್ರಮುಖ ಅರ್ಜಿಯನ್ನು ಕೂಡಾ ಅದೇ ದಿನ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಇಡಿಯಿಂದ ಬಂಧಿಸಲ್ಪಟ್ಟ ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಸ್ತುತ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಮೇ 7 ರಂದು, ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್