ಪ್ರಜ್ವಲ್ ರೇವಣ್ಣ 
ದೇಶ

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರೆಂದು ಹೇಳಿಕೊಂಡ ಮೂವರಿಂದ ಸುಳ್ಳು ದೂರು ದಾಖಲಿಸಲು ಸಂತ್ರಸ್ತೆಗೆ ಒತ್ತಾಯ- NCW

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಜನರ ಗುಂಪೊಂದು ಕಿರುಕುಳ ನೀಡುವುದಾಗಿ ಬೆದರಿಕೆ ಹಾಕಿದ ನಂತರ ಸುಳ್ಳು ದೂರು ದಾಖಲಿಸುವಂತೆ ತನ್ನನ್ನು ಒತ್ತಾಯಿಸಿದ್ದಾಗಿ ಸಂತ್ರಸ್ತೆಯೊಬ್ಬರು ಹೇಳಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ.

ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಜನರ ಗುಂಪೊಂದು ಕಿರುಕುಳ ನೀಡುವುದಾಗಿ ಬೆದರಿಕೆ ಹಾಕಿದ ನಂತರ ಸುಳ್ಳು ದೂರು ದಾಖಲಿಸುವಂತೆ ತನ್ನನ್ನು ಒತ್ತಾಯಿಸಿದ್ದಾಗಿ ಸಂತ್ರಸ್ತೆಯೊಬ್ಬರು ಹೇಳಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ. ಮೂವರು ಸಿವಿಲ್ ಸಮವಸ್ತ್ರ ಧರಿಸಿದವರ ವಿರುದ್ಧ ದೂರು ದಾಖಲಿಸಲು ಆಯೋಗಕ್ಕೆ ಬಂದಿದ್ದ ಓರ್ವ ಮಹಿಳೆ, ಅವರು ಕರ್ನಾಟಕ ಪೊಲೀಸ್ ಅಧಿಕಾರಿಗಳಾಗಿದ್ದು, ಈ ಪ್ರಕರಣದಲ್ಲಿ ಸುಳ್ಳು ಕೇಸ್ ದಾಖಲಿಸಲು ಒತ್ತಾಯಿಸುತ್ತಿದ್ದಾರೆ ಎಂದು ಮಹಿಳೆ ಆರೋಪ ಮಾಡಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.

"ದೂರು ದಾಖಲಿಸುವಂತೆ ಬೆದರಿಕೆ ಹಾಕುವಂತೆ ತನಗೆ ಕರೆಗಳು ಬಂದಿವೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ.ಆಕೆಗೆ ಬೆದರಿಕೆ ಕಿರುಕುಳ ನೀಡುವ ಮೂಲಕ ಸುಳ್ಳು ದೂರು ದಾಖಲಿಸುವಂತೆ ಗುಂಪು ಒತ್ತಾಯಿಸಿದ ನಂತರ ಇದು ಬೆಳಕಿಗೆ ಬಂದಿದೆ. ಗಂಭೀರ ಪರಿಸ್ಥಿತಿಯಲ್ಲಿ ಆಕೆಯ ಕುಟುಂಬಕ್ಕಾಗಿ ದೂರುದಾರರು ರಕ್ಷಣೆ ಬಯಸಿದ್ದು, ಈ ಮಹಿಳೆಗೆ ಸೂಕ್ತ ಭದ್ರತೆ ಒದಗಿಸುವಂತೆ ಡಿಜಿಪಿ ಅಲೋಕ್ ಮೋಹನ್ ಅವರಿಗೆ ಸೂಚಿಸಲಾಗಿದೆ ಎಂದು ಆಯೋಗ ಹೇಳಿದೆ.

ಪ್ರತ್ಯೇಕ ಬೆಳವಣಿಗೆಯೊಂದರಲ್ಲಿ ಆನ್‌ಲೈನ್ ದೂರುಗಳನ್ನು ಸಲ್ಲಿಸಿದ 700 ಮಹಿಳೆಯರು ಸಾಮಾಜಿಕ ಹೋರಾಟ ಗುಂಪಿನೊಂದಿಗೆ ಸಂಯೋಜಿತರಾಗಿದ್ದಾರೆ. ಪ್ರಕರಣದಲ್ಲಿ ಪ್ರಾಥಮಿಕ ದೂರುದಾರರೊಂದಿಗೆ ಯಾವುದೇ ನೇರ ಒಳಗೊಳ್ಳುವಿಕೆ ಅಥವಾ ಸಂಬಂಧವನ್ನು ಹೊಂದಿಲ್ಲ. “ಮಹಿಳೆಯರ ವಿರುದ್ಧ ನಡೆಸಲಾಗುವ ಯಾವುದೇ ರೀತಿಯ ಹಿಂಸಾಚಾರ ಅಥವಾ ಲೈಂಗಿಕ ದೌರ್ಜನ್ಯವನ್ನು ಖಂಡಿಸುವಲ್ಲಿ NCW ದೃಢವಾಗಿ ನಿಂತಿದೆ. ಪ್ರಜ್ವಲ್ ರೇವಣ್ಣ ಪ್ರಕರಣದ ಸುತ್ತಲಿನ ಇತ್ತೀಚಿನ ಬೆಳವಣಿಗೆಗಳು ತ್ವರಿತ ಮತ್ತು ನಿರ್ಣಾಯಕ ಕ್ರಮ ತೆಗೆದುಕೊಳ್ಳಲು ಪ್ರೇರೇಪಿಸಿದೆ ಎದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಮಹಿಳೆಯರ ಹಕ್ಕುಗಳು ಮತ್ತು ಘನತೆಯನ್ನು ಎತ್ತಿಹಿಡಿಯುವ ಬದ್ಧತೆಯನ್ನು ಪ್ರದರ್ಶಿಸುತ್ತಿದೆ.“ಮೂರು ದಿನಗಳ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳುವಂತೆ ಸೂಚಿಸುವ ಡಿಜಿಪಿಗೆ ಕಳುಹಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತೆಗೆದುಕೊಂಡ ಕ್ರಮದ ವರದಿಯನ್ನು ಸಮಯೋಚಿತವಾಗಿ ಸಲ್ಲಿಸಿರುವುದು ಹಲವಾರು ಮಹತ್ವದ ವಿಷಯಗಳು ಹೊರಗೆ ಬರಲು ಕಾರಣವಾಗಿದೆ. ಸಂತ್ರಸ್ತೆಯರ ದಾರಿನ ಆಧಾರದ ಮೇಲೆ ದಾಖಲಾದ ಎರಡು ಕೇಸ್ ಗಳು ಮತ್ತು ಸಂತ್ರಸ್ತೆಯ ಮಗನಿಂದ ಅಪಹರಣ ಪ್ರಕರಣ ಕುರಿತ ವರದಿ ಇದಾಗಿದೆ. ಆದಾಗ್ಯೂ, ಈ ಪ್ರಕರಣದಲ್ಲಿ ಯಾವುದೇ ಸಂತ್ರಸ್ತರು ದೂರು ದಾಖಲಿಸಲು ಮುಂದೆ ಬಂದಿಲ್ಲ" ಎಂದು ಎನ್‌ಸಿಡಬ್ಲ್ಯೂ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT