ಅಮಿತ್ ಶಾ online desk
ದೇಶ

ಮುಸ್ಲಿಂ ಮೀಸಲಾತಿ ತೆಗೆದು ಅದನ್ನು SC/ST ಗಳಿಗೆ ನೀಡುತ್ತೇವೆ: ಗೃಹ ಸಚಿವ ಅಮಿತ್ ಶಾ

ಲೋಕಸಭಾ ಚುನಾವಣೆ 2024 ಗೆ 4 ನೇ ಹಂತದ ಮತದಾನ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಮತ್ತೆ ಮೀಸಲಾತಿ ಚರ್ಚೆ ಮುನ್ನೆಲೆಗೆ ಬಂದಿದೆ.

ತೆಲಂಗಾಣ: ಲೋಕಸಭಾ ಚುನಾವಣೆ 2024 ಗೆ 4 ನೇ ಹಂತದ ಮತದಾನ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಮತ್ತೆ ಮೀಸಲಾತಿ ಚರ್ಚೆ ಮುನ್ನೆಲೆಗೆ ಬಂದಿದೆ. ಗೃಹ ಸಚಿವ ಅಮಿತ್ ಶಾ ತೆಲಂಗಾಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ, ಎಸ್ ಸಿ/ಎಸ್ ಟಿಗಳ ಮೀಸಲಾತಿಯನ್ನು ಹೆಚ್ಚಿಸುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸುಳ್ಳುಗಳನ್ನು ಹೇಳುವ ಮೂಲಕ ಚುನಾವಣೆ ಎದುರಿಸಲು ಯತ್ನಿಸುತ್ತಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ, ಮೀಸಲಾತಿಯನ್ನೇ ರದ್ದುಗೊಳಿಸುತ್ತಾರೆಂದು ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ.

ಪ್ರಧಾನಿ ಮೋದಿ 10 ವರ್ಷಗಳಿಂದ ಸರ್ವಾನುಮತ ಪಡೆದು ಆಡಳಿತ ನಡೆಸುತ್ತಿದ್ದಾರೆ. ಆದರೆ ಅವರೆಂದೂ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ಎಸ್ ಸಿ/ ಎಸ್ ಟಿ ಹಾಗೂ ಒಬಿಸಿಗಳ ಮೀಸಲಾತಿಯನ್ನು ಕಸಿದುಕೊಂಡಿದೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

2019 ರಲ್ಲಿ ತೆಲಂಗಾಣದ ಜನತೆ ನಮಗೆ 4 ಸ್ಥಾನಗಳನ್ನು ನೀಡಿದ್ದರು ಈ ಬಾರಿ 10 ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುತ್ತೇವೆ. ತೆಲಂಗಾಣ ಪ್ರಧಾನಿ ಮೋದಿ 400 ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಕ್ಕೆ ಸಹಕಾರಿಯಾಗಲಿದೆ. 10 ಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನು ನೀಡಿ, ನಾವು ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಎಸ್ ಸಿ/ ಎಸ್ ಟಿ ಹಾಗೂ ಒಬಿಸಿ ಮೀಸಲಾತಿಯನ್ನು ಏರಿಕೆ ಮಾಡುತ್ತೆವೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT