ಪ್ರಿಯಾಂಕಾ ಗಾಂಧಿ ವಾದ್ರಾ 
ದೇಶ

ಪ್ರಧಾನಿ ಮೋದಿ ಚುನಾವಣಾ ಭಾಷಣದಲ್ಲಿ ತೂಕವಿಲ್ಲ, ಬರೀ ಪೊಳ್ಳು ಮಾತು: ಪ್ರಿಯಾಂಕಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ಭಾಷಣಗಳು ಪೊಳ್ಳು ಮಾತುಗಳಾಗಿವೆ, ಅಧಿಕಾರಕ್ಕೆ ಬರುವ ಉದ್ದೇಶದಿಂದ ರಾಜಕೀಯ ಮಾಡುತ್ತಿದ್ದಾರೆಯೇ ಹೊರತು ಜನರ ಸೇವೆಗಾಗಿ ಅಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ನಂದೂರ್ಬರ್: ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ಭಾಷಣಗಳು ಪೊಳ್ಳು ಮಾತುಗಳಾಗಿವೆ, ಅಧಿಕಾರಕ್ಕೆ ಬರುವ ಉದ್ದೇಶದಿಂದ ರಾಜಕೀಯ ಮಾಡುತ್ತಿದ್ದಾರೆಯೇ ಹೊರತು ಜನರ ಸೇವೆಗಾಗಿ ಅಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ನಂದೂರ್ಬಾರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋವಾಲ್ ಪಾದ್ವಿ ಅವರ ಪರ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು ಮೋದಿ ಜಿ ಮಾತನಾಡುವುದೆಲ್ಲವೂ 'ಖೋಖ್ಲಿ ಬಾತೇನ್' (ಪೊಳ್ಳು ಮಾತು) ಅದು ಯಾವುದೇ ತೂಕವನ್ನು ಹೊಂದಿಲ್ಲ ಎಂದು ಅವರು ಹೇಳಿದರು.

ನರೇಂದ್ರ ಮೋದಿ ಆದಿವಾಸಿಗಳ ಮನೆಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವ ಒಂದೇ ಒಂದು ಫೋಟೋ ನನಗೆ ತೋರಿಸಿ ಎಂದು ಗಾಂಧಿ ಹೇಳಿದರು.

ನಿಮ್ಮ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಗೌರವಿಸುವುದು ರಾಜಕೀಯ ನಾಯಕರ ಕರ್ತವ್ಯ, ಬಿಜೆಪಿ ಆದಿವಾಸಿಗಳ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಗೌರವಿಸುವುದಿಲ್ಲ ಎಂದು ಅವರು ಹೇಳಿದರು.

ಆದಿವಾಸಿ ಸಮುದಾಯಕ್ಕೆ ಸೇರಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನೂತನ ಸಂಸತ್ ಭವನವನ್ನು ಉದ್ಘಾಟಿಸಲು ಅಥವಾ ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲು ಅವಕಾಶವಿರಲಿಲ್ಲ. ನಿಜವಾಗಿ ಗೌರವ ನೀಡುವ ವಿಷಯ ಬಂದಾಗ ಮೋದಿಯವರು ಹಿಂದೆ ಸರಿಯುತ್ತಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!