ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ದ್ದು 'ವೋಟ್ ಬ್ಯಾಂಕ್' ರಾಜಕಾರಣ ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ರಾಜ್ಯದ ಆಡಳಿತ ಪಕ್ಷದ 'ಗೂಂಡಾಗಳು' ಆರೋಪಿಗಳನ್ನು ರಕ್ಷಿಸಲು ಸಂದೇಶಖಾಲಿಯಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಂದೇಶಖಾಲಿಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ಲೈಂಗಿಕ ಶೋಷಣೆಯ ಆರೋಪಗಳು ಬಹಿರಂಗಗೊಂಡ ನಂತರ, ಬಿಜೆಪಿ ಮತ್ತು ಟಿಎಂಸಿ ನಡುವೆ ಕೆಲ ಸಮಯದಿಂದ ಆರೋಪ ಮತ್ತು ಪ್ರತ್ಯಾರೋಪಗಳ ಸುತ್ತು ಜೋರಾಗಿಯೇ ಇದೆ. ಉತ್ತರ 24 ಪರಗಣ ಜಿಲ್ಲೆಯ ಬ್ಯಾರಕ್‌ಪೋರ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ತೃಣಮೂಲ ಕಾಂಗ್ರೆಸ್ (TMC) ಆಡಳಿತದಲ್ಲಿ ರಾಜ್ಯದಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ ಎಂದು ಆರೋಪಿಸಿದರು.
ಮೋದಿ ಇರುವವರೆಗೂ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಜಾರಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದರು. ಸಂದೇಶಖಾಲಿಯ ಸಹೋದರಿಯರು ಮತ್ತು ತಾಯಂದಿರಿಗೆ ತೃಣಮೂಲ ಕಾಂಗ್ರೆಸ್ ಏನು ಮಾಡಿದೆ ಎಂದು ನಾವೆಲ್ಲರೂ ನೋಡಿದ್ದೇವೆ. ಟಿಎಂಸಿ ಗೂಂಡಾಗಳು ಸಂದೇಶಖಾಲಿಯಲ್ಲಿ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ. ಏಕೆಂದರೆ ಪ್ರಮುಖ ಆರೋಪಿಯ ಹೆಸರು ಷಹಜಹಾನ್ ಶೇಖ್. ಸಂದೇಶ್‌ಖಾಲಿಯ ಅಪರಾಧಿಗಳನ್ನು ರಕ್ಷಿಸಲು ಟಿಎಂಸಿ ಯಾವುದೇ ಕಲ್ಲನ್ನು ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ರಾಜಕೀಯ ವಿವಾದವನ್ನು ಹುಟ್ಟು ಹಾಕಿರುವ ಈ ವಿಡಿಯೋಗಳ ಸತ್ಯಾಸತ್ಯತೆಯನ್ನು ಪಿಟಿಐ ದೃಢಪಡಿಸಿಲ್ಲ. ತೃಣಮೂಲ ಕಾಂಗ್ರೆಸ್ ಆಡಳಿತದಲ್ಲಿ ಬಂಗಾಳ ಭ್ರಷ್ಟಾಚಾರದ ಕೇಂದ್ರವಾಗಿದೆ. ಬಾಂಬ್ ತಯಾರಿಕೆಯ ಗುಡಿ ಕೈಗಾರಿಕೆಯಾಗಿದೆ ಎಂದು ಆರೋಪಿಸಿದ ಮೋದಿ, ರಾಜ್ಯದ ಆಡಳಿತ ಪಕ್ಷವು ವೋಟ್ ಬ್ಯಾಂಕ್ ರಾಜಕೀಯಕ್ಕೆ ಶರಣಾಗಿದೆ ಎಂದು ಹೇಳಿದರು. ಇಲ್ಲಿ ಶ್ರೀರಾಮನ ಹೆಸರನ್ನು ಹೇಳದಂತ ಪರಿಸ್ಥಿತಿ ಇದೆ. ರಾಮನವಮಿ ಆಚರಿಸಲು ಸಾಧ್ಯವಾಗದ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮತಬ್ಯಾಂಕ್ ರಾಜಕಾರಣಕ್ಕೆ ಶರಣಾಗಿದೆ.