ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯೆ ಮತ್ತು ಮಾಜಿ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ(ಡಿಸಿಡಬ್ಲ್ಯೂ) ಸ್ವಾತಿ ಮಲಿವಾಲ್ ಅವರು ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.
ಸಿಎಂ ನಿವಾಸದೊಳಗೆ ನನ್ನನ್ನು ಥಳಿಸಲಾಗಿದೆ ಎಂದು ಮಲಿವಾಲ್ ಆರೋಪಿಸಿದ್ದಾರೆ.
ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಭಿಬವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಂದು ಆಪ್ ಸಂಸದೆ ಆರೋಪಿಸಿದ್ದಾರೆ.
ಮಾಧ್ಯಮಗಳ ವರದಿಗಳ ಪ್ರಕಾರ, ಮಲಿವಾಲ್ ಅವರು ದೆಹಲಿ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದು, ತಕ್ಷಣವೇ ಪೊಲೀಸರು ಸಿಎಂ ನಿವಾಸಕ್ಕೆ ಆಗಮಿಸಿದ್ದಾರೆ.