ಮೊರಾದಾಬಾದ್ ಕಾರು ಅಪಘಾತ 
ದೇಶ

Moradabad Car Accident: ಭೀಕರ ರಸ್ತೆ ಅಪಘಾತ, 3 ಬ್ಯಾಂಕ್ ಉದ್ಯೋಗಿಗಳ ಸಾವು; ಕಾರಣ ಕೋತಿಗಳು!

ಉತ್ತರ ಪ್ರದೇಶದ ಮೊರದಾಬಾದ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ 3 ಬ್ಯಾಂಕ್ ಉದ್ಯೋಗಿ ಸಾವನ್ನಪ್ಪಿದ್ದಾರೆ. ಅಚ್ಚರಿ ಎಂದರೆ ಈ ಅಪಘಾತಕ್ಕೆ ಕೋತಿಗಳು ಕಾರಣ ಎಂದು ಹೇಳಲಾಗಿದೆ.

ಲಖನೌ: ಉತ್ತರ ಪ್ರದೇಶದ ಮೊರದಾಬಾದ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ 3 ಬ್ಯಾಂಕ್ ಉದ್ಯೋಗಿ ಸಾವನ್ನಪ್ಪಿದ್ದಾರೆ. ಅಚ್ಚರಿ ಎಂದರೆ ಈ ಅಪಘಾತಕ್ಕೆ ಕೋತಿಗಳು ಕಾರಣ ಎಂದು ಹೇಳಲಾಗಿದೆ.

ಹೌದು.. ದಿಢೀರ್‌ ಎಂದು ಕೋತಿಗಳು ರಸ್ತೆಗೆ ಲಗ್ಗೆ ಇಟ್ಟ ಪರಿಣಾಮ ಕಾರು ನಿಯಂತ್ರಣ ತಪ್ಪಿ ಟ್ಯಾಂಕರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಬ್ಯಾಂಕ್‌ ಉದ್ಯೋಗಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೊರದಾಬಾದ್-ಅಲಿಗಢ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ(ಮೇ 13) ನಡೆದಿದೆ.

ಮೊರದಾಬಾದ್‌ ನ ಡೋಮ್‌ ಗಢ್‌ ಪ್ರದೇಶದಲ್ಲಿ ಈ ಅಪಘಾತ ಘಟನೆ ನಡೆದಿತ್ತು. ಮೃತರನ್ನು ಆಕ್ಸಿಸ್‌ ಬ್ಯಾಂಕ್‌ ಮ್ಯಾನೇಜರ್‌ ಸೌರಭ್‌ ಶ್ರೀವಾತ್ಸವ್‌, ಕ್ಯಾಶಿಯರ್‌ ದಿವ್ಯಾಂಶು ಮತು ಹಾಗೂ ಅಮಿತ್‌ ಎಂದು ಗುರುತಿಸಲಾಗಿದೆ.

ಆಕ್ಸಿಸ್‌ ಬ್ಯಾಂಕ್‌ ನ ಮೂವರು ಉದ್ಯೋಗಿಗಳು ತೆರಳುತ್ತಿದ್ದಾಗ ಕಾರು ಟ್ಯಾಂಕರ್‌ ಗೆ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಮಿತ್‌ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

ಮಂಗಗಳ ಗುಂಪು ದಿಢೀರನೆ ರಸ್ತೆಗೆ ಆಗಮಿಸಿದ್ದ ಪರಿಣಾಮ ಈ ಅಪಘಾತಕ್ಕೆ ಕಾರಣ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್