ಕಂಗನಾ ರನೌತ್ 
ದೇಶ

ಭಾರತ ಹಿಂದೂ ರಾಷ್ಟ್ರವಾಗಬೇಕು: ಕಂಗನಾ ರನೌತ್

2014 ರಲ್ಲಿ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್.

ಮಂಡಿ: 2014 ರಲ್ಲಿ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ ಅವರು, ಭಾರತ 'ಹಿಂದೂ ರಾಷ್ಟ್ರ'ವಾಗಬೇಕು ಎಂದು ಸೋಮವಾರ ಹೇಳಿದ್ದಾರೆ.

ಇಂದು ಕುಲುವಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕಂಗನಾ, ‘1947 ರಲ್ಲಿ ಪಾಕಿಸ್ತಾನವನ್ನು ಧರ್ಮದ ಆಧಾರದ ಮೇಲೆ ರಚಿಸಲಾಯಿತು. ಹಾಗಾದರೆ ಆ ಸಮಯದಲ್ಲಿ ಭಾರತವನ್ನು ಹಿಂದೂ ರಾಷ್ಟ್ರವೆಂದು ಏಕೆ ಘೋಷಿಸಲಿಲ್ಲ’ ಎಂದು ಪ್ರಶ್ನಿಸಿದರು. ಅಲ್ಲದೆ ಭಾರತ ಹಿಂದೂ ರಾಷ್ಟ್ರವಾಗಬೇಕು. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ" ಎಂದಿದ್ದಾರೆ.

1947 ರ ನಂತರ ಏನು ಅನುಸರಿಸಿದರು. ದೇಶವು ಬ್ರಿಟಿಷರ ಆಳ್ವಿಕೆಯಿಂದ ಮುಕ್ತವಾದ ನಂತರ ಹಲವಾರು ದಶಕಗಳ ಕಾಲ ಕಾಂಗ್ರೆಸ್‌ನ ದುರಾಡಳಿತವನ್ನು ನೋಡಿದೆ. ನಮ್ಮ ಪೂರ್ವಜರು ಮೊಘಲರ ಗುಲಾಮಗಿರಿ, ನಂತರ ಬ್ರಿಟಿಷರ ಗುಲಾಮಗಿರಿ ಮತ್ತು ನಂತರ ಕಾಂಗ್ರೆಸ್‌ನ ದುರಾಡಳಿತವನ್ನು ನೋಡಿದ್ದಾರೆ. ಆದರೆ ನಮಗೆ ನಿಜವಾಗಿಯೂ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ ಎಂದು ಕಂಗನಾ ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್ ಅವರ ಎದುರು ಕಂಗನಾ ಕಣಕ್ಕಿಳಿದಿದ್ದಾರೆ. ಮಂಡಿ ಕ್ಷೇತ್ರಕ್ಕೆ ಜೂನ್ 1ರಂದು ಮತದಾನ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video