ದೇಶ

ದೆಹಲಿ ಆದಾಯ ತೆರಿಗೆ ಇಲಾಖೆ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ; ಅಧಿಕಾರಿ ಸಾವು

ದೆಹಲಿಯ ಆದಾಯ ತೆರಿಗೆ ಇಲಾಖೆಯ ಸಿಆರ್ ಕಟ್ಟಡದಲ್ಲಿ ಮಂಗಳವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡದಲ್ಲಿ ಕಚೇರಿಯ ಅಧಿಕಾರಿ ಸಾವನ್ನಪ್ಪಿದ್ದಾರೆ.

ನವದೆಹಲಿ: ದೆಹಲಿಯ ಆದಾಯ ತೆರಿಗೆ ಇಲಾಖೆಯ ಸಿಆರ್ ಕಟ್ಟಡದಲ್ಲಿ ಮಂಗಳವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡದಲ್ಲಿ ಕಚೇರಿಯ ಅಧೀಕ್ಷಕರಾಗಿ ಕೆಲಸ ಮಾಡುತ್ತಿದ್ದ 46 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಐಟಿಒ ಪ್ರದೇಶದ ಸಿಆರ್ ಬಿಲ್ಡಿಂಗ್‌ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ಇಂದು ಮಧ್ಯಾಹ್ನ ಪಿಸಿಆರ್ ಕರೆ ಬಂದಿತ್ತು.

"ತಕ್ಷಣ ಅಗ್ನಿಶಾಮಕ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಬೆಂಕಿಯನ್ನು ಹತೋಟಿಗೆ ತರಲಾಯಿತು ಮತ್ತು ಒಟ್ಟು ಏಳು ಜನರನ್ನು ಅಲ್ಲಿಂದ ರಕ್ಷಿಸಲಾಯಿತು. 46 ವರ್ಷದ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಕಚೇರಿ ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದರಂತೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಅಗ್ನಿಶಾಮಕ ಸಿಬ್ಬಂದಿ ಐವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಏಳು ಜನರನ್ನು ರಕ್ಷಿಸಿದ್ದಾರೆ ಮತ್ತು ಸಣ್ಣಪುಟ್ಟ ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅವರು ಹೇಳಿದರು.

"ಆದಾಯ ತೆರಿಗೆ ಇಲಾಖೆಯ ಸಿಆರ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ನಮಗೆ ಮಧ್ಯಾಹ್ನ 3.07 ಕ್ಕೆ ಕರೆ ಬಂದಿದೆ. ನಾವು ಒಟ್ಟು 21 ಅಗ್ನಿಶಾಮಕ ಟೆಂಡರ್‌ಗಳನ್ನು ರವಾನಿಸಿದ್ದೇವೆ. ಹೆಚ್ಚಿನ ತನಿಖೆಗಾಗಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಸ್ಥಳೀಯ ಪೊಲೀಸರಿಗೆ ಈ ವಿಷಯದ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel