ಕೆ ಕವಿತಾ  
ದೇಶ

ಅಬಕಾರಿ ನೀತಿ ಪ್ರಕರಣ: ಕೆ ಕವಿತಾ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮಂಗಳವಾರ ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.

ಈ ಹಿಂದೆ ಪ್ರಕರಣದಲ್ಲಿ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ, ಇಡಿ ಇಂದು ಕವಿತಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತು. ಆರೋಪಿಯ ವಿಚಾರಣೆ ನಡೆಸಿದ ಇಡಿ ಮತ್ತು ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಆದೇಶ ನೀಡಿದರು.

ಏತನ್ಮಧ್ಯೆ, ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿರುವ ಹೊಸ ಚಾರ್ಜ್ ಶೀಟ್ ಅನ್ನು ಪರಿಗಣಿಸಬೇಕೆ ಎಂಬ ಆದೇಶವನ್ನು ನ್ಯಾಯಾಧೀಶವರು, ಮೇ 20ಕ್ಕೆ ಕಾಯ್ದಿರಿಸಿದ್ದಾರೆ.

ಇಂದು ನಡೆದ ವಿಚಾರಣೆಯ ವೇಳೆ, ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲು ಪ್ರಾಸಿಕ್ಯೂಷನ್ ದೂರಿನಲ್ಲಿ ಇಡಿ ಚಾರ್ಜ್ ಶೀಟ್‌ಗೆ ಸಮಾನವಾದ ಸಾಕಷ್ಟು ಪುರಾವೆಗಳಿವೆ ಎಂದು ಕೇಂದ್ರ ತನಿಖಾ ಸಂಸ್ಥೆ ನ್ಯಾಯಾಧೀಶರಿಗೆ ತಿಳಿಸಿದೆ.

ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

Operation Sindoorಗೆ ಪಾಕಿಸ್ತಾನ ತಿರುಗೇಟು; ಭಾರತದ 2 ವಾಯುನೆಲೆ ಧ್ವಂಸ ಅಂತೆ..! ಆದ್ರೆ ಅದು ಅಸ್ತಿತ್ವದಲ್ಲೇ ಇಲ್ಲ..!

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

SCROLL FOR NEXT