ಚಟ್ಟದಲ್ಲಿ ಆಗಮಿಸಿದ ಪಕ್ಷೇತರ ಅಭ್ಯರ್ಥಿ 
ದೇಶ

ಉತ್ತರ ಪ್ರದೇಶ: ನಾಮಪತ್ರ ಸಲ್ಲಿಸಲು 'ಚಟ್ಟ'ದಲ್ಲಿ ಆಗಮಿಸಿದ ಪಕ್ಷೇತರ ಅಭ್ಯರ್ಥಿ!

ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ‘ಆರ್ತಿ ಬಾಬಾ’ ಎಂದೇ ಹೆಸರಾಗಿರುವ ಯಾದವ್,ಎಂಬಿಎ ಮಾಡಿದ್ದರೂ ಈಗ ಬೌದ್ಧ ಸನ್ಯಾಸಿಯಾಗಿದ್ದು, ಭಿಕ್ಷೆಯಿಂದ ಜೀವನ ನಡೆಸುತ್ತಿರುವುದಾಗಿ ಹೇಳುತ್ತಾರೆ.

ಲಖನೌ: ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ‘ಆರ್ತಿ ಬಾಬಾ’ ಎಂದೇ ಹೆಸರಾಗಿರುವ ಯಾದವ್,ಎಂಬಿಎ ಮಾಡಿದ್ದರೂ ಈಗ ಬೌದ್ಧ ಸನ್ಯಾಸಿಯಾಗಿದ್ದು, ಭಿಕ್ಷೆಯಿಂದ ಜೀವನ ನಡೆಸುತ್ತಿರುವುದಾಗಿ ಹೇಳುತ್ತಾರೆ.

ಈ ಹಿಂದೆಯೂ ಅವರು ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ತಮ್ಮ ಚುನಾವಣಾ ಕಚೇರಿಯನ್ನು ಸ್ಮಶಾನದ ಮೈದಾನದಲ್ಲಿ ತೆರೆದಿರುವುದಾಗಿ ಹೇಳುವ ಯಾದವ್, ಹೊಸ ಮೋಟಾರು ವಾಹನ ಕಾಯ್ದೆಯಡಿ ವಾಹನ ದಂಡದಂತಹ ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳನ್ನು ತೆಗೆದುಹಾಕಬೇಕೆಂದು ಬಯಸುತ್ತಾರೆ.

"ನಿರುದ್ಯೋಗಿ ಕಾರ್ಮಿಕರು ಇಷ್ಟು ದೊಡ್ಡ ಮೊತ್ತದ ದಂಡ ಪಾವತಿಸಲು ಹಣ ಎಲ್ಲಿಂದ ತರುತ್ತಾರೆ ಎಂದು ಪ್ರಶ್ನಿಸುವ ಯಾದವ್, "ಮೊಬೈಲ್ ಫೋನ್‌ಗಳಲ್ಲಿ ಸ್ಥಗಿತಗೊಂಡಿರುವ ಜೀವಮಾನದ ಒಳಬರುವ ಕರೆಗಳ ಸೌಲಭ್ಯವನ್ನು ಮರುಪ್ರಾರಂಭಿಸಬೇಕು" ಎಂದರು. ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ತನ್ನ ಜೀವನವನ್ನು ಮುಡಿಪಾಗಿಡಲು ಬಯಸಿದ್ದರಿಂದ ಅವಿವಾಹಿತನಾಗಿ ಉಳಿಯಲು ನಿರ್ಧರಿಸಿರುವುದಾಗಿ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?