ಸಂಜಯ್ ಸಿಂಗ್ 
ದೇಶ

ಮಲಿವಾಲ್ ಜತೆ ಅನುಚಿತವಾಗಿ ವರ್ತಿಸಿದ ಸಿಎಂ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿರುದ್ಧ ಕಠಿಣ ಕ್ರಮ: ಸಂಜಯ್ ಸಿಂಗ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸೋಮವಾರ ಸಿಎಂ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರೊಂದಿಗೆ "ಅನುಚಿತವಾಗಿ ವರ್ತಿಸಿದ್ದಾರೆ".

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸೋಮವಾರ ಸಿಎಂ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರೊಂದಿಗೆ "ಅನುಚಿತವಾಗಿ ವರ್ತಿಸಿದ್ದಾರೆ" ಮತ್ತು ಈ ವಿಷಯದಲ್ಲಿ ಪಕ್ಷದ ವರಿಷ್ಠರು ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಇದು "ಖಂಡನೀಯ ಘಟನೆ" ಎಂದು ಹೇಳಿದರು.

"ನಿನ್ನೆ, ಸ್ವಾತಿ ಮಲಿವಾಲ್ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ಹೋಗಿದ್ದರು. ಈ ವೇಳೆ ಡ್ರಾಯಿಂಗ್ ರೂಮಿನಲ್ಲಿ ಸಿಎಂ ಭೇಟಿಗಾಗಿ ಕಾಯುತ್ತಿದ್ದಾಗ ಬಿಭವ್ ಕುಮಾರ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಇದು ಅತ್ಯಂತ ಖಂಡನೀಯ ಘಟನೆ. ಇದು ಕೇಜ್ರಿವಾಲ್ ಅವರ ಗಮನಕ್ಕೆ ಬಂದಿದೆ ಮತ್ತು ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ಅವರು ಹೇಳಿದರು.

ಸೋಮವಾರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿದ ಮಲಿವಾಲ್ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವೈಯಕ್ತಿಕ ಸಿಬ್ಬಂದಿಯೊಬ್ಬರು, ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರಿಗೆ ಯಾವುದೇ ಅಧಿಕೃತ ದೂರು ಬಂದಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!