ರಾಹುಲ್ ಗಾಂಧಿ 
ದೇಶ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ, ಮೀಸಲಾತಿ ರದ್ದುಗೊಳಿಸುತ್ತದೆ: ರಾಹುಲ್ ಗಾಂಧಿ

ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು "ನಾಶಪಡಿಸಲಿದೆ" ಮತ್ತು ಆದಿವಾಸಿಗಳು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಒದಗಿಸಲಾದ ಮೀಸಲಾತಿಯನ್ನು ರದ್ದುಗೊಳಿಸಲು ಬಯಸಿದೆ.

ಬೋಲಂಗಿರ್: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು "ನಾಶಪಡಿಸಲಿದೆ" ಮತ್ತು ಆದಿವಾಸಿಗಳು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಒದಗಿಸಲಾದ ಮೀಸಲಾತಿಯನ್ನು ರದ್ದುಗೊಳಿಸಲು ಬಯಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ.

ಇಂದು ಒಡಿಶಾದ ಬೋಲಂಗಿರ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಅದು ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸುತ್ತದೆ ಮತ್ತು ದೇಶವನ್ನು 22 ಬಿಲಿಯನೇರ್‌ಗಳು ಮುನ್ನಡೆಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

"ಬಿಜೆಪಿ ಈ ಪುಸ್ತಕವನ್ನು ಹರಿದು ಹಾಕಲು ಬಯಸುತ್ತಿದೆ. ಆದರೆ ನಾವು ಕಾಂಗ್ರೆಸ್ ಮತ್ತು ಭಾರತದ ಜನರು ಇದಕ್ಕೆ ಅವಕಾಶ ನೀಡುವುದಿಲ್ಲ" ಎಂದು ರಾಹುಲ್ ಗಾಂಧಿ ತಮ್ಮ ಕೈಯಲ್ಲಿರುವ ಸಂವಿಧಾನವನ್ನು ತೋರಿಸಿದರು.

“ಬಿಜೆಪಿ ಗೆದ್ದರೆ ಮೀಸಲಾತಿಯನ್ನು ರದ್ದುಪಡಿಸಲಾಗುತ್ತದೆ, ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸಲಾಗುತ್ತದೆ ಮತ್ತು ದೇಶವನ್ನು 22 ಕೋಟ್ಯಾಧಿಪತಿಗಳು ಮುನ್ನಡೆಸುತ್ತಾರೆ. ಹೀಗಾಗಿ ಜನಪರ ಸರ್ಕಾರ ರಚನೆಯಾಗಬೇಕು’’ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇತರರ ಪ್ರಭಾವಕ್ಕೆ ಒಳಗಾಗಿ ಹಾಗೆ ಮಾತನಾಡಿದೆ, ಕ್ಷಮಿಸಿ': ದೆಹಲಿ ಪ್ರತಿಭಟನೆಯಲ್ಲಿ PM ಮೋದಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಬಾಲಕಿ-Video

'ನನ್ನ ಜೊತೆಗೆ ತಾಯಿಯನ್ನೂ ನಿಂದಿಸಿದರು, ಆದರೂ 'ನಮ್ಮ ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಮತ್ತೊಂದು ವಿಡಿಯೊ ಹಂಚಿಕೊಂಡ PM ಮೋದಿ'-Video

'ದೇಶವನ್ನೇ ಕ್ಷಮಿಸಿದ ನರೇಂದ್ರ ಮೋದಿ: ಪ್ರಧಾನಿಯ ಹೊಸ ವಿಡಿಯೋ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ!

ಕೇರಳದಲ್ಲಿ ಭಾರಿ ಮಳೆಯಿಂದ ಭೂಕುಸಿತ; ಮೂವರು ಸಾವು! ಹಲವು ಜಿಲ್ಲೆಗಳಿಗೆ IMD 'ರೆಡ್ ಅಲರ್ಟ್' ಘೋಷಣೆ

ಮಂಡ್ಯ: ಕಾವೇರಿ ಹೋರಾಟಕ್ಕೆ ಸ್ಪಂದಿಸದೆ ರೈತರ ಕೆಂಗಣ್ಣಿಗೆ ಗುರಿಯಾದ ನಟಿ ರಾಗಿಣಿ ದ್ವಿವೇದಿ!