ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಲಕ್ನೋದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 
ದೇಶ

ಮೋದಿಗೆ ವಿದಾಯ ಹೇಳಲು ಜನರು ಸಜ್ಜು; ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಮಲ್ಲಿಕಾರ್ಜುನ ಖರ್ಗೆ

ನಾಲ್ಕು ಹಂತಗಳ ಲೋಕಸಭೆ ಚುನಾವಣೆಯ ನಂತರ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಪ್ರಬಲ ಸ್ಥಾನದಲ್ಲಿದ್ದು, ಸರ್ಕಾರ ರಚಿಸಲಿದೆ. ದೇಶದ ಜನರು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿದಾಯ ಹೇಳಲು ಸಿದ್ಧರಾಗಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಪ್ರತಿಪಾದಿಸಿದ್ದಾರೆ.

ಲಖನೌ: ನಾಲ್ಕು ಹಂತಗಳ ಲೋಕಸಭೆ ಚುನಾವಣೆಯ ನಂತರ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಪ್ರಬಲ ಸ್ಥಾನದಲ್ಲಿದ್ದು, ಸರ್ಕಾರ ರಚಿಸಲಿದೆ. ದೇಶದ ಜನರು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿದಾಯ ಹೇಳಲು ಸಿದ್ಧರಾಗಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಪ್ರತಿಪಾದಿಸಿದ್ದಾರೆ.

ಇದು ಸಂವಿಧಾನವನ್ನು ಉಳಿಸುವ ಚುನಾವಣೆಯಾಗಿದೆ ಎಂದ ಅವರು, ಸಂವಿಧಾನ ಬದಲಾಯಿಸುವ ಕುರಿತು ಮಾತನಾಡುವವರ ವಿರುದ್ಧ ಪ್ರಧಾನಿ ಮೋದಿ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

'ದೇಶದಲ್ಲಿ ನಾಲ್ಕು ಸುತ್ತಿನ ಮತದಾನ ಪೂರ್ಣಗೊಂಡಿದೆ. ಇಂಡಿಯಾ ಮೈತ್ರಿಕೂಟ ಅತ್ಯಂತ ಭದ್ರ ಸ್ಥಿತಿಯಲ್ಲಿದೆ. ದೇಶದ ಜನತೆ ನರೇಂದ್ರ ಮೋದಿಯವರಿಗೆ ವಿದಾಯ ಹೇಳಲು ಸಿದ್ಧರಾಗಿದ್ದಾರೆ ಎಂದು ನಾನು ಸಂಪೂರ್ಣ ವಿಶ್ವಾಸದಿಂದ ಹೇಳಬಲ್ಲೆ. ಇಂಡಿಯಾ ಮೈತ್ರಿಕೂಟವು ಜೂನ್ 4 ರಂದು ಹೊಸ ಸರ್ಕಾರ ರಚಿಸಲಿದೆ' ಎಂದು ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

'ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನೇ ಬದಲಾಯಿಸಲಿದೆ. ಈ ಜನರು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಆರೆಸ್ಸೆಸ್ ನಾಯಕ ಮೋಹನ್ ಭಾಗವತ್ ಮೊದಲು ಹೇಳಿಕೆ ನೀಡಿದರು. ಸಂವಿಧಾನ ಬದಲಾವಣೆಗೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಕರ್ನಾಟಕದಲ್ಲಿ ಬಿಜೆಪಿ ನಾಯಕರೊಬ್ಬರು ಹೇಳಿದ್ದರು. ಉತ್ತರ ಪ್ರದೇಶದಲ್ಲಿ ಕೂಡ ಬಿಜೆಪಿಯ ಅನೇಕರು ಸಂವಿಧಾನ ಬದಲಿಸುವ ಮಾತನಾಡಿದ್ದಾರೆ. ಸಂವಿಧಾನ ಬದಲಾವಣೆ ಮಾಡುವವರ ವಿರುದ್ಧ ಪ್ರಧಾನಿ ಮೋದಿ ಏಕೆ ಕ್ರಮ ಕೈಗೊಂಡಿಲ್ಲ' ಎಂದು ಖರ್ಗೆ ಪ್ರಶ್ನಿಸಿದರು.

'ಮೋದಿ ಅವರು ಈ ಬಗ್ಗೆ ಮೌನವಾಗಿರುವುದು ನನಗೆ ಆಶ್ಚರ್ಯ ತಂದಿದೆ. ನೀವು ಶಕ್ತಿ ಮತ್ತು 56 ಇಂಚಿನ ಎದೆಯ ಬಗ್ಗೆ ಮಾತನಾಡುತ್ತೀರಿ; ನೀವು ಅವರನ್ನು ಏಕೆ ಹೆದರಿಸಬಾರದು. ಅವರನ್ನು ಪಕ್ಷದಿಂದ ಏಕೆ ಹೊರಹಾಕಬಾರದು? ಸಂವಿಧಾನದ ವಿರುದ್ಧ ಇಂತಹ ಮಾತುಗಳನ್ನು ಯಾರೊಬ್ಬರೂ ಹೇಳಬಾರದು' ಎಂದು ಅವರು ಹೇಳಿದರು.

ಬಡವರಿಗೆ ಆಹಾರ ಸಿಗುವಂತೆ ಮಾಡಲು ಕಾಂಗ್ರೆಸ್ ಕಾನೂನು ಮಾಡಿದೆ. ಇಂಡಿಯಾ ಮೈತ್ರಿಕೂಟದ ಸರ್ಕಾರ ರಚನೆಯಾದರೆ, ನಾವು ಬಡವರಿಗೆ ತಿಂಗಳಿಗೆ 10 ಕೆಜಿ ಉಚಿತ ಪಡಿತರವನ್ನು ನೀಡುತ್ತೇವೆ ಎಂದು ಅವರು ಹೇಳಿದರು.

ರ್ಯಾಲಿಯಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 79 ಸ್ಥಾನಗಳನ್ನು ಮೈತ್ರಿಕೂಟ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

SCROLL FOR NEXT