ಮಮತಾ ಬ್ಯಾನರ್ಜಿ 
ದೇಶ

INDIA ಮೈತ್ರಿಕೂಟ ಸರ್ಕಾರ ರಚನೆಗೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ವಿರೋಧ ಪಕ್ಷಗಳ ಮೈತ್ರಿಕೂಟ INDIA ಬಣ ಕೇಂದ್ರದಲ್ಲಿ ಸರ್ಕಾರ ರಚನೆಗೆ ಬಾಹ್ಯ ಬೆಂಬಲ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಚಿನ್ಸುರಾ: ವಿರೋಧ ಪಕ್ಷಗಳ ಮೈತ್ರಿಕೂಟ INDIA ಬಣ ಕೇಂದ್ರದಲ್ಲಿ ಸರ್ಕಾರ ರಚನೆಗೆ ಬಾಹ್ಯ ಬೆಂಬಲ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಹೂಗ್ಲಿ ಜಿಲ್ಲೆಯ ಚಿನ್ಸುರಾದಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ, ಲೋಕಸಭೆಯಲ್ಲಿ 400 ಸ್ಥಾನ ಗೆಲ್ಲುವ ಬಿಜೆಪಿಯ ಮಹತ್ವಾಕಾಂಕ್ಷೆಯ ಗುರಿಯ ಬಗ್ಗೆ ಬ್ಯಾನರ್ಜಿ ಸಂದೇಹ ವ್ಯಕ್ತಪಡಿಸಿದರು.

"ಬಿಜೆಪಿ 400 ಸ್ಥಾನ ಗೆಲ್ಲುತ್ತದೆ ಎಂದು ಹೇಳುತ್ತಿದೆ. ಆದರೆ ಈ ಬಾರಿ ಅದು ಆಗುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. INDIA ಬಣ ಕೇಂದ್ರದಲ್ಲಿ ಸರ್ಕಾರ ರಚಿಸಲು ಹೊರಗಿನಿಂದ ಟಿಎಂಸಿ ಬೆಂಬಲ ನೀಡಲಿದೆ ಎಂದರು.

ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನದ ವಿರುದ್ಧ ಬ್ಯಾನರ್ಜಿ ತಮ್ಮ ಪಕ್ಷದ ಅಚಲ ನಿಲುವನ್ನು ಘೋಷಿಸಿದರು.

ಚುನಾವಣಾ ಆಯೋಗ ಕೈಗೊಂಬೆಯಾಗಿದ್ದು, ಮೋದಿಯವರ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತದೆ. ಎರಡೂವರೆ ತಿಂಗಳಿನಿಂದ ಚುನಾವಣೆ ನಡೆಯುತ್ತಿದೆ. ಅಧಿಕಾರಿಗಳು ಸಾಮಾನ್ಯ ಜನರ ಹೋರಾಟವನ್ನು ಎಂದಾದರೂ ಅರಿತುಕೊಂಡಿದ್ದೀರಾ ಎಂದು ಬ್ಯಾನರ್ಜಿ ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ