ಸಂಜಯ್ ಸಿಂಗ್ - ಅರವಿಂದ್ ಕೇಜ್ರಿವಾಲ್ - ಅಖಿಲೇಶ್ ಯಾದವ್ 
ದೇಶ

ಸ್ವಾತಿ ಮಲಿವಾಲ್ ಮೇಲೆ 'ಹಲ್ಲೆ' ಕುರಿತ ಪ್ರಶ್ನೆಗೆ ಕೇಜ್ರಿವಾಲ್ ಮೌನ; ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದ ಸಂಜಯ್ ಸಿಂಗ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಕುರಿತ ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ಗುರುವಾರ ನಿರಾಕರಿಸಿದರು.

ಲಖನೌ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಕುರಿತ ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ಗುರುವಾರ ನಿರಾಕರಿಸಿದರು.

ಇಂದು ಲಖನೌನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ದೆಹಲಿ ಸಿಎಂಗೆ ಪತ್ರಕರ್ತರು ಪದೇಪದೆ ಮಲಿವಾಲ್ ಹಲ್ಲೆ ಪ್ರಕರಣ ಪ್ರಸ್ತಾಪಿಸಿದಾಗ, ‘ಇದಕ್ಕಿಂತ ಮುಖ್ಯವಾದ ವಿಷಯಗಳು ಬೇರೆ ಇವೆ’ ಎಂದು ಅಖಿಲೇಶ್ ಪ್ರಶ್ನೆಯನ್ನು ತಳ್ಳಿಹಾಕಿದರು.

ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷರ ಮೇಲೆ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಚಾರದಲ್ಲಿ ಆರಂಭದಲ್ಲಿ ಮೌನ ವಹಿಸಿದ್ದ ಎಎಪಿ ಸಂಸದ ಸಂಜಯ್ ಸಿಂಗ್ ಅವರು, ಕೇಜ್ರಿವಾಲ್ ಅವರು ಘಟನೆಯ ಬಗ್ಗೆ ಗಮನ ಹರಿಸಿದ್ದು, ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಇಂದು ಸಹ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಪಕ್ಷವನ್ನು ಸಮರ್ಥಿಸಿಕೊಳ್ಳಲು ಮತ್ತೊಮ್ಮೆ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರಿಗೆ ಅವಕಾಶ ನೀಡಲಾಯಿತು.

ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಸಿಂಗ್, ಜಂತರ್ ಮಂತರ್‌ನಲ್ಲಿ ನಡೆದ ಕುಸ್ತಿಪಟುಗಳ ಪ್ರತಿಭಟನೆಯ ವೇಳೆ ಸ್ವಾತಿ ಮಲಿವಾಲ್ ಅವರನ್ನು ದೆಹಲಿ ಪೊಲೀಸರು ಎಳೆದೊಯ್ದು ಹಲ್ಲೆ ಮಾಡಿದ ಘಟನೆಯ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಆರೋಪಿಸಿದರು.

"ಆಮ್ ಆದ್ಮಿ ಪಕ್ಷ ನಮ್ಮ ಕುಟುಂಬ. ಈ ವಿಚಾರದಲ್ಲಿ ಪಕ್ಷ ಸ್ಪಷ್ಟ ನಿಲುವು ತಳೆದಿದೆ... ಜಂತರ್ ಮಂತರ್‌ನಲ್ಲಿ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕ್ಕಾಗಿ ಹೋರಾಡಲು ಮುಂದಾದ ಸ್ವಾತಿ ಮಲಿವಾಲ್ ಪ್ರಕರಣಕ್ಕೆ ಅವರು ಮೊದಲು ಉತ್ತರಿಸಬೇಕು... ಈ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದು ಸಿಂಗ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT