ಸಂಜಯ್ ರಾವತ್ 
ದೇಶ

ಹೋರ್ಡಿಂಗ್ ಕುಸಿದು 16 ಜನ ಮೃತಪಟ್ಟ ಪ್ರದೇಶದಲ್ಲಿ ರೋಡ್‌ಶೋ ನಡೆಸುವುದು ಅಮಾನವೀಯ: ಮೋದಿ ವಿರುದ್ಧ ರಾವತ್ ಕಿಡಿ

ಮುಂಬೈನಲ್ಲಿ ಹೋರ್ಡಿಂಗ್ ಕುಸಿದು 16 ಮಂದಿ ಸಾವನ್ನಪ್ಪಿದ ಪ್ರದೇಶದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಿರುವುದು ಅಮಾನವೀಯ.

ಮುಂಬೈ: ಮುಂಬೈನಲ್ಲಿ ಹೋರ್ಡಿಂಗ್ ಕುಸಿದು 16 ಮಂದಿ ಸಾವನ್ನಪ್ಪಿದ ಪ್ರದೇಶದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಿರುವುದು ಅಮಾನವೀಯ ಎಂದು ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಗುರುವಾರ ಕಿಡಿಕಾರಿದ್ದಾರೆ.

ಘಾಟ್‌ಕೋಪರ್ ಪಶ್ಚಿಮದಿಂದ ಘಾಟ್‌ಕೋಪರ್ ಪೂರ್ವಕ್ಕೆ ಪ್ರಧಾನಿ ಮೋದಿಯವರ ರೋಡ್‌ಶೋ ನಿಮಿತ್ತ ಬುಧವಾರ ಮಧ್ಯಾಹ್ನ 12 ಗಂಟೆಯಿಂದ ರಸ್ತೆಗಳು ಮತ್ತು ಮೆಟ್ರೋ ರೈಲು ಸೇವೆಗಳನ್ನು ಬಂದ್ ಮಾಡಲಾಗಿತ್ತು ಎಂದು ಅವರು ಹೇಳಿದರು.

"ಒಬ್ಬ ವ್ಯಕ್ತಿಯ ಪ್ರಚಾರಕ್ಕಾಗಿ ರಸ್ತೆಗಳನ್ನು ಮುಚ್ಚಿ ಜನರಿಗೆ ಅನಾನುಕೂಲತೆ ಉಂಟುಮಾಡುವ ಇಂತಹ ಘಟನೆ ಎಂದಿಗೂ ನಡೆದಿಲ್ಲ. ಹೋರ್ಡಿಂಗ್ ಕುಸಿತು 16 ಜನ ಸಾವನ್ನಪ್ಪಿದ ಸ್ಥಳದಲ್ಲೇ ರೋಡ್‌ಶೋ ನಡೆಸಿರುವುದು ಅಮಾನವೀಯವಾಗಿದೆ" ಎಂದು ಸೇನಾ(ಯುಬಿಟಿ) ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಾಟ್‌ಕೋಪರ್‌ನ ಛೇಡಾ ನಗರ ಪ್ರದೇಶದಲ್ಲಿ ಸೋಮವಾರ ಬೀಸಿದ ಬಿರುಗಾಳಿಗೆ 120 x 120 ಅಡಿಗಳ ಬೃಹತ್ ಹೋರ್ಡಿಂಗ್ ಕುಸಿದು 16 ಜನರು ಸಾವನ್ನಪ್ಪಿದ್ದರು ಮತ್ತು 75 ಮಂದಿ ಗಾಯಗೊಂಡಿದ್ದರು.

ಪ್ರಧಾನಿ ಮೋದಿ ಬುಧವಾರ ಸಂಜೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಅಭ್ಯರ್ಥಿಗಳ ಪರವಾಗಿ ಘಾಟ್‌ಕೋಪರ್‌ನಲ್ಲಿ ಮೆಗಾ ರೋಡ್‌ಶೋ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್